2 Corinthians 6:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ಪ್ರಸಿದ್ಧರಾಗಿದ್ದರೂ ಕೆಲವರು ನಮ್ಮನ್ನು ಅಪ್ರಸಿದ್ಧರಂತೆ ಕಾಣುತ್ತಾರೆ. ನಾವು ಸಾಯುವಂತಿದ್ದರೂ ಬದುಕಿದ್ದೇವೆ; ಶಿಕ್ಷಿಸಲ್ಪಟ್ಟರೂ ಕೊಲ್ಲಲ್ಪಡಲಿಲ್ಲ;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಪ್ರಸಿದ್ಧರಾಗಿದ್ದರೂ ಅಪರಿಚಿತರೆನ್ನಿಸಿಕೊಂಡು ಸೇವೆ ಮಾಡಿದ್ದೇವೆ. ಸಾಯುವವರಾಗಿ ತೋರಿದರೂ, ಬದುಕಿದ್ದೇವೆ! ನೋಡಿ, ಶಿಕ್ಷೆಗೆ ಗುರಿಯಾದರೂ ಕೊಲ್ಲಲ್ಪಡದವರಾಗಿದ್ದೇವೆ,
Kannada BSI Bible 2016
ಅಪರಿಚಿತರೆನಿಸಿಕೊಂಡರೂ ಪರಿಚಿತರೂ ಸಾಯುವವರಾಗಿ ತೋರಿದರೂ ಇಗೋ, ನಾವು ಬದುಕುವವರೂ ಆಗಿದ್ದೇವೆ; ಶಿಕ್ಷೆ ಹೊಂದುವ ವರಾಗಿದ್ದರೂ ಕೊಲ್ಲಲ್ಪಡದವರೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಸಗಾರರೆನಿಸಿಕೊಂಡರೂ ಸತ್ಯವಂತರೂ, ಅಜ್ಞಾತರೆನಿಸಿಕೊಂಡರೂ ವಿಜ್ಞಾತರೂ, ಸಾಯುವವರಾಗಿ ತೋರಿದರೂ ಬದುಕುವವರೂ ಆಗಿದ್ದೇವೆ. ಶಿಕ್ಷೆ ಹೊಂದುವವರಾಗಿದ್ದರೂ ಕೊಲ್ಲಲ್ಪಡದವರೂ,
Kannada Bible (KNCL) BSI 2016
ಪ್ರಖ್ಯಾತರಾಗಿದ್ದರೂ ಖ್ಯಾತರಹಿತರಾಗಿದ್ದೇವೆ. ಬದುಕಿದ್ದರೂ ಸತ್ತವರೆನಿಸಿಕೊಂಡಿದ್ದೇವೆ. ಶಿಕ್ಷೆಗೆ ಗುರಿಯಾಗಿದ್ದರೂ ಇನ್ನೂ ಕೊಲೆಗೆ ಈಡಾಗದೆ ಇದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಖ್ಯಾತರಾಗಿದ್ದರೂ ಅಪ್ರಖ್ಯಾತರಾಗಿದ್ದೇವೆ; ಸಾಯುತ್ತಿದ್ದರೂ ನಾವು ಜೀವಿಸುತ್ತಿದ್ದೇವೆ, ನಾವು ಪೆಟ್ಟು ತಿಂದಿದ್ದೇವೆ, ಕೊಲೆಗೆ ಗುರಿಯಾಗಲಿಲ್ಲ.