2 Corinthians 7:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರ ಇಷ್ಟಾನುಸಾರವಾದ ದುಃಖವು ಹೃದಯವನ್ನೂ ಜೀವಿತವನ್ನೂ ಪರಿವರ್ತಿಸುತ್ತದೆ. ಈ ಪರಿವರ್ತನೆಯು ರಕ್ಷಣೆಗೆ ನಡೆಸುತ್ತದೆ. ಈ ಪರಿವರ್ತನೆಯ ವಿಷಯದಲ್ಲಿ ನಾವು ವ್ಯಸನಪಡಬೇಕಾಗಿಲ್ಲ. ಆದರೆ, ಲೋಕವು ಹೊಂದಿರುವ ದುಃಖವು ಮರಣವನ್ನು ಬರಮಾಡುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.
Kannada BSI Bible 2016
ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಚಿತ್ತಾನುಸಾರವಾಗಿರುವ ದುಃಖವು ಮಾನಸಾಂತರವನ್ನುಂಟುಮಾಡಿ ರಕ್ಷಣೆಗೆ ಕಾರಣವಾಗಿದೆ; ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.
Kannada Bible (KNCL) BSI 2016
ದೇವರ ಚಿತ್ತಾನುಸಾರ ಬಂದೊದಗುವ ದುಃಖವು ಹೃದಯ ಪರಿವರ್ತನೆಗೆ ಕಾರಣವಾಗುತ್ತದೆ; ಜೀವೋದ್ಧಾರಕ್ಕೆ ಎಡೆಮಾಡುತ್ತದೆ. ಕೇವಲ ಪ್ರಾಪಂಚಿಕವಾದ ದುಃಖವು ಸಾವಿಗೆ ಒಯ್ಯುತ್ತದೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೈವಿಕ ದುಃಖವು ಪಶ್ಚಾತ್ತಾಪವನ್ನು ತಂದು ರಕ್ಷಣೆಗೆ ನಡೆಸುತ್ತದೆ. ಆ ಪಶ್ಚಾತ್ತಾಪದಲ್ಲಿ ವಿಷಾಧವಿರುವುದಿಲ್ಲ. ಆದರೆ ಪ್ರಾಪಂಚಿಕ ದುಃಖವು ಮರಣಕ್ಕೆ ನಡೆಸುತ್ತದೆ.