2 Corinthians 7:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಆ ಪತ್ರವನ್ನು ಬರೆದದ್ದು ತಪ್ಪು ಮಾಡಿದವನಿಗೋಸ್ಕರವಲ್ಲ, ಆ ತಪ್ಪಿನಿಂದ ದುಃಖಕ್ಕೆ ಒಳಗಾದವನಿಗೋಸ್ಕರವೂ ಅಲ್ಲ. ಆದರೆ ನಮ್ಮ ವಿಷಯದಲ್ಲಿ ನಿಮಗಿರುವ ಮಹಾಚಿಂತೆಯನ್ನು ನೀವು ದೇವರ ಎದುರಿನಲ್ಲಿ ನೋಡುವಂತಾಗಬೇಕೆಂದು ಆ ಪತ್ರವನ್ನು ಬರೆದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮಗೆ ಬರೆದದ್ದು ತಪ್ಪುಮಾಡಿದವನಿಗೆ ದಂಡನೆಯಾಗಲಿ ಎಂದಲ್ಲ, ಆ ತಪ್ಪಿನಿಂದ ನೊಂದವನಿಗೆ ನ್ಯಾಯ ದೊರಕಲೆಂದೂ ಅಲ್ಲ; ನಮ್ಮ ಬಗ್ಗೆ ನಿಮಗಿರುವ ಅಕ್ಕರೆ, ಆಸಕ್ತಿಗಳು ದೇವರ ಸನ್ನಿಧಿಯಲ್ಲಿ ನಿಮಗೆ ವ್ಯಕ್ತವಾಗಲೆಂದೇ ಬರೆದೆನು. ಆದ್ದರಿಂದಲೇ ನಮ್ಮ ಮನಸ್ಸಿಗೆ ನೆಮ್ಮದಿ ಉಂಟಾಗಿದೆ.
Kannada BSI Bible 2016
ನಾನು ಹೀಗೆ ನಿಮಗೆ ಬರೆದದ್ದು ಅನ್ಯಾಯ ಮಾಡಿದವನಿ ಗೋಸ್ಕರವಲ್ಲ, ಅನ್ಯಾಯ ಸಹಿಸಿದವನಿಗೋಸ್ಕರವೂ ಅಲ್ಲ; ದೇವರ ದೃಷ್ಟಿಯಲ್ಲಿ ನಿಮಗೋಸ್ಕರ ನಮಗಿರುವ ಚಿಂತೆಯು ನಿಮಗೆ ತೋರಿ ಬರುವದಕ್ಕೋಸ್ಕರವೇ ಬರೆದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮಗೆ ಬರೆದಾಗ ಅನ್ಯಾಯಮಾಡಿದವನಿಗೆ ದಂಡನೆಯೂ ಅನ್ಯಾಯಹೊಂದಿದವನಿಗೆ ನ್ಯಾಯವೂ ಆಗಬೇಕೆಂಬುವ ಕಾರಣದಿಂದ ಬರೆಯಲಿಲ್ಲ; ನಮಗೋಸ್ಕರ ನಿಮಗಿರುವ ಆಸಕ್ತಿಯು ದೇವರ ಮುಂದೆ ನಿಮಗೆ ವ್ಯಕ್ತವಾಗಬೇಕೆಂಬುವ ಉದ್ದೇಶದಿಂದಲೇ ಬರೆದೆನು.
Kannada Bible (KNCL) BSI 2016
ನಾನು ನಿಮಗೆ ಆ ಪತ್ರವನ್ನು ಬರೆದದ್ದು ತಪ್ಪುಮಾಡಿದವನಿಗೆ ದಂಡನೆಯಾಗಲಿ ಎಂದಲ್ಲ, ಆ ತಪ್ಪಿನಿಂದ ನೊಂದವನಿಗೆ ನ್ಯಾಯ ದೊರಕಲೆಂದೂ ಅಲ್ಲ; ನಮ್ಮ ಬಗ್ಗೆ ನಿಮಗಿರುವ ಅಕ್ಕರೆ-ಆಸಕ್ತಿಗಳು ದೇವರ ಸನ್ನಿಧಿಯಲ್ಲಿ ನಿಮಗೆ ವ್ಯಕ್ತವಾಗಲೆಂದೇ ಬರೆದೆನು. ಆದ್ದರಿಂದಲೇ ನಮ್ಮ ಮನಸ್ಸಿಗೆ ನೆಮ್ಮದಿ ಉಂಟಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಆ ಪತ್ರ ನಿಮಗೆ ಬರೆದದ್ದು, ತಪ್ಪು ಮಾಡಿದವನಿಗೋಸ್ಕರವಾಗಿ ಅಲ್ಲ ಮತ್ತು ಆ ತಪ್ಪಿನಿಂದ ಹಾನಿಯಾದವರಿಗೋಸ್ಕರವಾಗಿಯೂ ಅಲ್ಲ, ನೀವು ನಮಗೆ ಎಷ್ಟು ನಿಷ್ಠೆಯುಳ್ಳವರು ಎಂದು ದೇವರ ಸನ್ನಿಧಿಯಲ್ಲಿ ನಿಮಗೆ ನೀವೇ ನೋಡುವಂತೆ ಬರೆದೆನು.