2 Corinthians 7:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದಲೇ ನಮಗೆ ಆದರಣೆಯಾಯಿತು. ತೀತನು ಬಹು ಸಂತೋಷವಾಗಿರುವುದನ್ನು ಕಂಡು ನಮಗೆ ಮತ್ತಷ್ಟು ಸಂತೋಷವಾಯಿತು. ನೀವೆಲ್ಲರೂ ಅವನನ್ನು ಸಂತೋಷಗೊಳಿಸಿದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.
Kannada BSI Bible 2016
ಆದಕಾರಣ ನಿಮ್ಮ ಸಂತೈಸುವಿಕೆಯಿಂದ ನಮಗೆ ಆದರಣೆ ಉಂಟಾಯಿತು. ಹೌದು, ನಿಮ್ಮೆಲ್ಲರಿಂದ ತೀತನ ಮನಸ್ಸಿಗೆ ಉಪಶಮನವಾದ ಕಾರಣ ನಾವು ಅವನ ಸಂತೋಷಕ್ಕಾಗಿ ಹೆಚ್ಚಾಗಿ ಸಂತೋಷಪಟ್ಟೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನಮ್ಮ ಮನಸ್ಸಿಗೆ ಆದರಣೆ ಉಂಟಾಯಿತು. ಅಷ್ಟು ಮಾತ್ರವೇ ಅಲ್ಲ, ತೀತನ ಮನಸ್ಸಿಗೆ ನಿಮ್ಮೆಲ್ಲರಿಂದ ಉಪಶಮನವಾದ ಕಾರಣ ನಾವು ಅವನ ಸಂತೋಷವನ್ನು ನೋಡಿ ಮತ್ತೂ ಹೆಚ್ಚಾಗಿ ಸಂತೋಷಪಟ್ಟೆವು.
Kannada Bible (KNCL) BSI 2016
ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಇವೆಲ್ಲವುಗಳಿಂದ ನಮಗೆ ಉತ್ತೇಜನವಾಯಿತು. ನಮಗೆ ಉತ್ತೇಜನವಾಗಿದ್ದು ಅಲ್ಲದೆ, ನಿಮ್ಮೆಲ್ಲರಿಂದ ತೀತನ ಆತ್ಮಕ್ಕೆ ಉಪಶಮನವಾದ ಕಾರಣ, ನಾವು ಅವನ ಸಂತೋಷಕ್ಕಾಗಿ ಇನ್ನಷ್ಟು ಆನಂದಿಸಿದೆವು.