2 Corinthians 7:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳವನ್ನು ಕೊಡಿರಿ. ನಾವು ನಿಮ್ಮಲ್ಲಿ ಯಾರಿಗೂ ಕೆಟ್ಟದ್ದನ್ನು ಮಾಡಿಲ್ಲ. ಯಾರ ನಂಬಿಕೆಯನ್ನೂ ಹಾಳುಮಾಡಿಲ್ಲ; ಯಾರನ್ನೂ ವಂಚಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ; ನಿಮ್ಮಲ್ಲಿ ಯಾರಿಗೂ ನಾವು ಅನ್ಯಾಯ ಮಾಡಲಿಲ್ಲ, ಯಾರಿಗೂ ಹಾನಿಯುಂಟುಮಾಡಿಲ್ಲ, ಯಾರನ್ನೂ ವಂಚಿಸಲಿಲ್ಲ.
Kannada BSI Bible 2016
ನಮ್ಮನ್ನು ಸೇರಿಸಿಕೊಳ್ಳಿರಿ; ನಾವು ಯಾರಿಗೂ ಅನ್ಯಾಯಮಾಡಲಿಲ್ಲ. ಯಾರನ್ನೂ ಕೆಡಿಸಲಿಲ್ಲ, ಯಾರನ್ನೂ ವಂಚಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳಕೊಡಿರಿ; ನಾವು ನಿಮ್ಮಲ್ಲಿ ಯಾರಿಗೂ ಅನ್ಯಾಯಮಾಡಲಿಲ್ಲ, ಯಾರನ್ನೂ ಕೆಡಿಸಲಿಲ್ಲ, ಯಾರನ್ನೂ ವಂಚಿಸಲಿಲ್ಲ.
Kannada Bible (KNCL) BSI 2016
ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳವಿರಲಿ. ನಾವು ಯಾರಿಗೂ ಅನ್ಯಾಯಮಾಡಿಲ್ಲ, ಯಾರಿಗೂ ಕೇಡನ್ನು ಬಗೆದಿಲ್ಲ, ಯಾರನ್ನೂ ವಂಚಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ. ನಾವು ಯಾರಿಗೂ ಅನ್ಯಾಯ ಮಾಡಲಿಲ್ಲ, ಯಾರಿಗೂ ನಾವು ಕೇಡು ಬಗೆಯಲಿಲ್ಲ, ನಾವು ಸ್ವಂತ ಲಾಭಕ್ಕಾಗಿ ಯಾರನ್ನೂ ದುಡಿಸಿಕೊಳ್ಳಲಿಲ್ಲ.