2 Corinthians 7:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಇದನ್ನು ಹೇಳುತ್ತಿರುವುದು ನಿಮ್ಮನ್ನು ನಿಂದಿಸುವುದಕ್ಕಾಗಿಯಲ್ಲ. ನಿಮ್ಮೊಂದಿಗೆ ಬದುಕುವಷ್ಟರಮಟ್ಟಿಗೆ ಮತ್ತು ಸಾಯುವಷ್ಟರಮಟ್ಟಿಗೆ ನಿಮ್ಮನ್ನು ಅಪಾರವಾಗಿ ಪ್ರೀತಿಸುತ್ತೇವೆಂದು ನಾನು ಮೊದಲೇ ನಿಮಗೆ ತಿಳಿಸಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಮೇಲೆ ತಪ್ಪುಹೊರಿಸಬೇಕೆಂದು ನಾನು ಇದನ್ನು ಹೇಳುತ್ತಿಲ್ಲ; ನಿಮ್ಮ ಜೊತೆ ಸಾಯುವುದಕ್ಕೂ, ಬದುಕುವುದಕ್ಕೂ ಎನ್ನುವಷ್ಟರ ಮಟ್ಟಿಗೆ ನೀವು ನಮ್ಮ ಹೃದಯದಲ್ಲಿದ್ದೀರೆಂದು ನಾನು ಮೊದಲೇ ಹೇಳಿದ್ದೆನಲ್ಲಾ.
Kannada BSI Bible 2016
ನಿಮ್ಮ ಮೇಲೆ ತಪ್ಪು ಹೊರಿಸಬೇಕೆಂದು ನಾನು ಇದನ್ನು ಹೇಳುವದಿಲ್ಲ; ಯಾಕಂದರೆ ನಿಮ್ಮೊಂದಿಗೆ ಸಾಯುವದಕ್ಕೂ ಬದುಕು ವದಕ್ಕೂ ನೀವು ನಮ್ಮ ಹೃದಯಗಳಲ್ಲಿದ್ದೀರೆಂದು ಮೊದಲೇ ಹೇಳಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಮೇಲೆ ತಪ್ಪುಹೊರಿಸಬೇಕೆಂದು ನಾನು ಇದನ್ನು ಹೇಳುವದಿಲ್ಲ. ಕೂಡಾ ಸಾಯುವದಕ್ಕೂ ಕೂಡಾ ಬದುಕುವದಕ್ಕೂ ನೀವು ನಮ್ಮ ಹೃದಯದಲ್ಲಿದ್ದೀರೆಂದು ಮೊದಲೇ ಹೇಳಿದ್ದೇನಲ್ಲಾ.
Kannada Bible (KNCL) BSI 2016
ನಿಮ್ಮನ್ನು ನಿಂದಿಸುವುದಕ್ಕಾಗಿ ಇದನ್ನು ನಾನು ಹೇಳುತ್ತಿಲ್ಲ; ಈ ಮೊದಲೇ ನಿಮಗೆ ತಿಳಿಸಿರುವಂತೆ, ‘ಸತ್ತರೂ ಒಂದಾಗಿ ಸಾಯುತ್ತೇವೆ, ಬದುಕಿದರೂ ಒಂದಾಗಿ ಬದುಕುತ್ತೇವೆ,” ಎನ್ನುವಷ್ಟರ ಮಟ್ಟಿಗೆ ನೀವು ನನ್ನ ಹೃದಯದಲ್ಲಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಮೇಲೆ ತಪ್ಪು ಹೊರಿಸುವುದಕ್ಕಾಗಿ ನಾನು ಇದನ್ನು ನಿಮಗೆ ಹೇಳುತ್ತಿಲ್ಲ. ನಾವು ನಿಮ್ಮೊಂದಿಗೆ ಜೀವಿಸಿ, ಸಾಯುವಷ್ಟರ ಮಟ್ಟಿಗೆ ನಾವು ನಮ್ಮ ಹೃದಯದಾಳದಿಂದ ನಿಮ್ಮನ್ನು ಪ್ರೀತಿಸುತ್ತಿದ್ದೇವೆ ಎಂದು ನಾನು ಹಿಂದೆ ಹೇಳಲಿಲ್ಲವೇ?