2 Corinthians 7:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಮಕೆದೋನಿಯಕ್ಕೆ ಬಂದಾಗ ನಮಗೆ ವಿಶ್ರಾಂತಿಯೇ ಇರಲಿಲ್ಲ. ನಮ್ಮ ಸುತ್ತಮುತ್ತಲೆಲ್ಲಾ ಇಕ್ಕಟ್ಟುಗಳಿದ್ದವು. ಹೊರಗೆ ಕಲಹವಿತ್ತು, ಒಳಗೆ ಭಯವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಮಕೆದೋನ್ಯಕ್ಕೆ ಬಂದ ಮೇಲೂ ನಮ್ಮ ದೇಹಕ್ಕೆ ನೆಮ್ಮದಿ ಇರಲಿಲ್ಲ, ಬದಲಾಗಿ ಎಲ್ಲಾ ವಿಷಯಗಳಲ್ಲಿಯೂ ನಮಗೆ ತೊಂದರೆಗಳಿದ್ದವು. ಹೊರಗೆ ಜಗಳ, ಒಳಗೆ ಭಯ
Kannada BSI Bible 2016
ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಶರೀರಕ್ಕೆ ಏನೂ ವಿಶ್ರಾಂತಿಯಾಗಲಿಲ್ಲ; ಆದರೆ ಎಲ್ಲಾ ಕಡೆಯಲ್ಲಿಯೂ ನಮಗೆ ಕಳವಳವಿತ್ತು ಹೊರಗೆ ಕಲಹ; ಒಳಗೆ ಭಯವಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಮನಸ್ಸಿಗೆ ಏನೂ ಉಪಶಮನವಾಗಲಿಲ್ಲ, ಎಲ್ಲಾ ವಿಷಯಗಳಲ್ಲಿಯೂ ನಮಗೆ ಸಂಕಟವಿತ್ತು; ಹೊರಗೆ ಕಲಹ, ಒಳಗೆ ಭಯ.
Kannada Bible (KNCL) BSI 2016
ನಾವು ಮಕೆದೋನಿಯವನ್ನು ತಲುಪಿದ ಮೇಲೂ ದೇಹಕ್ಕೆ ಕಿಂಚಿತ್ತಾದರೂ ವಿಶ್ರಾಂತಿ ಸಿಗಲಿಲ್ಲ. ಎಲ್ಲಾ ಕಡೆಗಳಿಂದಲೂ ನಮಗೆ ತೊಂದರೆ ತಾಪತ್ರಯಗಳು ಬಂದುವು. ಹೊರಗೆ ಕಲಹ, ಒಳಗೆ ತಳಮಳ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಮಕೆದೋನ್ಯಕ್ಕೆ ಬಂದಿದ್ದಾಗ ನಮ್ಮ ದೇಹಕ್ಕೆ ವಿಶ್ರಾಂತಿ ದೊರೆಯಲಿಲ್ಲ. ಎಲ್ಲಾ ವಿಧದಲ್ಲಿಯೂ ಒತ್ತಡಗಳು: ಹೊರಗೆ ಹೋರಾಟ, ಒಳಗೆ ಅಂಜಿಕೆ.