2 Corinthians 7:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ನಾನು ಸಂತೋಷವಾಗಿದ್ದೇನೆ. ನಿಮ್ಮನ್ನು ದುಃಖಿತರನ್ನಾಗಿ ಮಾಡಿದ್ದಕ್ಕಾಗಿ ನಾನು ದುಃಖಿಸುತ್ತಿಲ್ಲ. ಆದರೆ ನಿಮ್ಮ ದುಃಖವು ನಿಮ್ಮ ಹೃದಯಗಳಲ್ಲಿ ಪರಿವರ್ತನೆಯನ್ನು ಉಂಟುಮಾಡಿದ್ದರಿಂದ ನಾನು ಸಂತೋಷವಾಗಿದ್ದೇನೆ. ದೇವರ ಇಚ್ಫೆಗನುಸಾರವಾಗಿ ನೀವು ದುಃಖಿತರಾದಿರಿ. ಆದ್ದರಿಂದ ನಮ್ಮಿಂದ ನಿಮಗೆ ಯಾವ ರೀತಿಯಲ್ಲಿಯೂ ನೋವಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗೆ ಯಾತನೆಯಾಯಿತೆಂದು ನಾನು ಈಗ ಸಂತೋಷಪಡದೆ ನೀವು ದುಃಖಪಟ್ಟು ಪಶ್ಚಾತ್ತಾಪಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಸಂತೋಷಪಡುತ್ತೇನೆ. ನೀವು ದೇವರ ಚಿತ್ತಾನುಸಾರವಾಗಿ ದುಃಖಿಸಿದ್ದರಿಂದ ನಮ್ಮಿಂದಾಗಿ ಯಾವುದರಲ್ಲಿಯೂ ನಿಮಗೆ ನಷ್ಟವಾಗಲಿಲ್ಲವಲ್ಲಾ.
Kannada BSI Bible 2016
ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಬೇರೆ ಮನಸ್ಸನ್ನು ಹೊಂದಿದ್ದಕ್ಕಾಗಿ ಸಂತೋಷಪಡುತ್ತೇನೆ. ನೀವು ದೇವರ ಚಿತ್ತಾನುಸಾರವಾಗಿ ದುಃಖಿಸಿದ್ದರಿಂದ ನವ್ಮಿುಂದ ಯಾವದರಲ್ಲಿಯೂ ನಷ್ಟಪಡಲಿಲ್ಲವಲ್ಲಾ.
Kannada Bible (KNCL) BSI 2016
ನಿಮಗೆ ದುಃಖ ಉಂಟಾಯಿತೆಂಬ ಕಾರಣದಿಂದ ಅಲ್ಲ, ಆ ದುಃಖದಿಂದ ನಿಮಗೆ ಮನಪರಿವರ್ತನೆ ಆಯಿತೆಂಬ ಕಾರಣದಿಂದ ಸಂತೋಷಪಡುತ್ತೇನೆ. ನಿಮಗೆ ದುಃಖ ಉಂಟಾದುದು ದೇವರ ಚಿತ್ತವೇ ಸರಿ. ಆದರೆ ನನ್ನಿಂದ ನಿಮಗೆ ಅನ್ಯಾಯವೇನೂ ಆಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಸಂತೋಷಪಡುತ್ತೇನೆ. ನಿಮಗೆ ದುಃಖವಾಯಿತೆಂಬ ಕಾರಣಕ್ಕಾಗಿ ಅಲ್ಲ. ಆ ದುಃಖವು ನಿಮ್ಮನ್ನು ಪಶ್ಚಾತ್ತಾಪಕ್ಕೆ ನಡೆಸಿ, ನಿಮಗಾದ ದುಃಖವು ದೇವರ ಚಿತ್ತದಿಂದ ಆಗಿದ್ದರಿಂದ ನಮ್ಮಿಂದ ನಿಮಗೆ ನಷ್ಟವಾಗಲಿಲ್ಲ ಎಂಬುದಕ್ಕಾಗಿಯೂ ಈಗ ಸಂತೋಷಪಡುತ್ತೇನೆ.