2 Corinthians 8:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಹೋದರ ಸಹೋದರಿಯರೇ, ಮಕೆದೋನಿಯದ ಸಭೆಗಳಲ್ಲಿ ದೇವರು ತೋರಿದ ಕೃಪೆಯ ಬಗ್ಗೆ ನಿಮಗೆ ತಿಳಿಸಲು ಇಷ್ಟಪಡುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯ ಕುರಿತು ನಿಮಗೆ ತಿಳಿಯಬೇಕೆಂದು ಬಯಸುತ್ತೇವೆ,
Kannada BSI Bible 2016
ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ಮಕೆದೋನ್ಯದ ಸಭೆಗಳಲ್ಲಿ ದೇವರ ಕೃಪೆಯು ತೋರಿದ ಬಗೆಯನ್ನು ನಿಮಗೆ ತಿಳಿಸುತ್ತೇವೆ.
Kannada Bible (KNCL) BSI 2016
ಸಹೋದರರೇ, ಮಕೆದೋನಿಯ ಸಭೆಗಳಿಗೆ ದೇವರು ದಯಪಾಲಿಸಿದ ಕೃಪಾತಿಶಯಗಳನ್ನು ನಾನು ನಿಮಗೆ ತಿಳಿಸ ಬಯಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ಮಕೆದೋನ್ಯದಲ್ಲಿರುವ ಸಭೆಗಳಿಗೆ ದೇವರು ಕೊಟ್ಟಿರುವ ಕೃಪೆಯನ್ನು ಕುರಿತು ನೀವು ತಿಳಿದಿರಬೇಕೆಂದು ನಮ್ಮ ಅಪೇಕ್ಷೆ.