2 Corinthians 8:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮಗೆ ಹೇಳುವುದೇನೆಂದರೆ: ಕಳೆದ ವರ್ಷ ಕೊಡುವುದರಲ್ಲಿ ನೀವೇ ಮೊದಲಿಗರಾಗಿದ್ದಿರಿ ಮತ್ತು ಮೊಟ್ಟಮೊದಲನೆಯದಾಗಿ ಕೊಟ್ಟವರು ನೀವೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಧರ್ಮಕಾರ್ಯವನ್ನು ಕುರಿತ ನನ್ನ ಸಲಹೆಯನ್ನು ತಿಳಿಸುತ್ತೇನೆ, ಇದು ನಿಮ್ಮ ಸಹಾಯಕ್ಕೆ; ಈ ಕಾರ್ಯವನ್ನು ಒಂದು ವರ್ಷದ ಹಿಂದೆ ನಡೆಸುವುದಕ್ಕೆ ಪ್ರಾರಂಭಿಸಿದ ನೀವು, ಮುಂದುವರಿಯಲು ಮನಸ್ಸು ಮಾಡಿದ ಹಾಗೆಯೇ ಅದನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಿರಿ.
Kannada BSI Bible 2016
ಈ ಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಇದನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ಅದನ್ನು ನಡಿಸಬೇಕೆಂದು ಮಾಡುವದರಲ್ಲಿಯೂ ನೀವು ಮುಂದಾಗಿದ್ದದರಿಂದ ಅದು ನಿಮಗೆ ವಿಹಿತವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಧರ್ಮಕಾರ್ಯವನ್ನು ಕುರಿತು ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ; ಈ ಕಾರ್ಯವನ್ನು ಒಂದು ವರುಷದ ಹಿಂದೆ ನಡಿಸುವದಕ್ಕೆ ತೊಡಗುವದರಲ್ಲಿಯೂ ನಡಿಸಬೇಕೆಂದು ಮನಸ್ಸು ಮಾಡುವದರಲ್ಲಿಯೂ ನೀವು ಅವರಿಗಿಂತ ಮೊದಲಿನವರಾದದರಿಂದ ನಮಗೆ ಅಷ್ಟು ಮಾತ್ರ ಹೇಳುವದು ವಿಹಿತವಾಗಿದೆ.
Kannada Bible (KNCL) BSI 2016
ಈ ವಿಷಯದಲ್ಲಿ ನನ್ನ ಸಲಹೆ ಏನೆಂದರೆ: ಒಂದು ವರ್ಷಕ್ಕೆ ಹಿಂದೆ ನೀವು ಪ್ರಾರಂಭಿಸಿದ ಈ ಸೇವಾಕಾರ್ಯವನ್ನು ಪೂರೈಸುವುದು ಲೇಸು. ಈ ಕಾರ್ಯವನ್ನು ಮೊದಲು ಆರಂಭಿಸಿದವರು ನೀವೇ. ಆರಂಭಿಸಬೇಕೆಂದು ಸೂಚಿಸಿದವರೂ ನೀವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ವಿಷಯದಲ್ಲಿ ನನ್ನ ಸಲಹೆ ಏನೆಂದರೆ, ಕಳೆದ ವರ್ಷದಲ್ಲಿ ಮೊದಲು ನೀವೇ ಈ ಕಾರ್ಯವನ್ನು ಪ್ರಾರಂಭಿಸಿದ್ದಲ್ಲದೇ ಇದನ್ನು ಮಾಡಬೇಕೆಂದು ಬಯಸಿದ್ದೀರಿ.