2 Corinthians 8:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನೀವು ಆರಂಭಿಸಿದ ಕಾರ್ಯವನ್ನು ಈಗ ಪೂರ್ಣಗೊಳಿಸಿರಿ. ಆಗ, ನಿಮ್ಮ ಕಾರ್ಯ ಮತ್ತು ನಿಮ್ಮ ಸಿದ್ಧಮನಸ್ಸು ಸರಿಸಮಾನವಾಗಿರುವುದು. ನಿಮ್ಮಲ್ಲಿರುವುದನ್ನು ಕೊಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಕಾರ್ಯವನ್ನು ಪ್ರಾರಂಭಿಸುವುದಕ್ಕೆ ನಿಮ್ಮಲ್ಲಿ ಸಿದ್ಧ ಮನಸ್ಸು ಇರುವ, ಹಾಗೆಯೇ ನಿಮ್ಮ ನಿಮ್ಮ ಶಕ್ತ್ಯನುಸಾರವಾಗಿ ಅದನ್ನು ನೆರವೇರಿಸಿರಿ.
Kannada BSI Bible 2016
ಈ ಕಾರ್ಯವನ್ನು ಮಾಡುವದಕ್ಕೆ ಹೇಗೆ ನಿಮ್ಮಲ್ಲಿ ಸಿದ್ದಮನಸ್ಸು ಇತ್ತೋ ಹಾಗೆಯೇ ನೆರವೇರಿಸಿರಿ; ಹೀಗೆ ನಿಮಗಿರುವದರೊಳಗಿಂದ ಆ ಕಾರ್ಯವನ್ನು ಪೂರ್ತಿ ಮಾಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಕಾರ್ಯವನ್ನು ಪ್ರಾರಂಭಿಸುವದಕ್ಕೆ ಹೇಗೆ ನಿಮ್ಮಲ್ಲಿ ಸಿದ್ಧಮನಸ್ಸು ಇತ್ತೋ ಹಾಗೆಯೇ ನಿಮ್ಮ ನಿಮ್ಮ ಶಕ್ತ್ಯನುಸಾರವಾಗಿ ನೆರವೇರಿಸಿರಿ.
Kannada Bible (KNCL) BSI 2016
ಆದ್ದರಿಂದ ಆರಂಭಿಸುವುದರಲ್ಲಿ ಎಷ್ಟು ಆಸಕ್ತರಾಗಿದ್ದಿರೋ, ಅಷ್ಟೇ ಆಸಕ್ತಿಯಿಂದ ನಿಮ್ಮ ನಿಮ್ಮ ಶಕ್ತಿಗನುಸಾರವಾಗಿ ನೀಡಿ ಈ ಯೋಜನೆಯನ್ನು ಪೂರೈಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನೀವು ಎಷ್ಟು ಆಸಕ್ತರಾಗಿ ಪ್ರಾರಂಭಿಸಿದ್ದೀರೋ, ಅಷ್ಟೇ ಆಸಕ್ತಿಯಿಂದ ಅದನ್ನು ಮುಗಿಸಿರಿ. ನಿಮ್ಮ ನಿಮ್ಮ ಶಕ್ತ್ಯಾನುಸಾರವಾಗಿ ಈ ಯೋಜನೆಯನ್ನು ಪೂರ್ಣಗೊಳಿಸಿರಿ.