2 Corinthians 8:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.
Kannada BSI Bible 2016
ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.
Kannada Bible (KNCL) BSI 2016
ಒಬ್ಬನು ಕೊಡುವುದಕ್ಕೆ ಮನಸ್ಸುಳ್ಳವನಾಗಿದ್ದರೆ, ಅವನು ತನ್ನಲ್ಲಿ ಇರುವುದಕ್ಕೆ ತಕ್ಕಂತೆ ಕೊಟ್ಟರೆ ಸಾಕು. ನಿಮ್ಮಲ್ಲಿ ಇಲ್ಲದ್ದನ್ನು ದೇವರು ಬಯಸುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರಿಗಾದರೂ ಕೊಡುವ ಮನಸ್ಸಿದ್ದರೆ, ಅದು ದೇವರ ದೃಷ್ಟಿಯಲ್ಲಿ ಕೊಟ್ಟಂತೆ ಪರಿಗಣಿಸಲಾಗುವುದು. ಏಕೆಂದರೆ ಕೊಡುವವರು ಎಷ್ಟು ಕೊಟ್ಟಿದ್ದಾರೆ ಎಂಬುದು ಪ್ರಾಮುಖ್ಯವಲ್ಲ, ಆದರೆ ಇಲ್ಲದಿರುವುದನ್ನು ದೇವರು ಬಯಸದೇ ಇರುವುದನ್ನು ಕೊಡಬಯಸುತ್ತಾರೆ.