2 Corinthians 8:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ನಿಮ್ಮಲ್ಲಿ ಬೇಕಾದಷ್ಟಿದೆ. ನಿಮ್ಮ ಈ ಸಮೃದ್ಧಿಯು ಇತರ ಜನರ ಕೊರತೆಯನ್ನು ನೀಗಿಸುವುದು. ಬಳಿಕ, ಅವರು ಸಮೃದ್ಧರಾಗಿರುವಾಗ ನಿಮ್ಮ ಕೊರತೆಯನ್ನು ನೀಗಿಸುವರು. ಹೀಗೆ ಎಲ್ಲರೂ ಸಮಾನರಾಗಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮಾನತ್ವ ಇರಬೇಕೆಂಬುದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆಯನ್ನು ನೀಗಿಸುತ್ತದೆ. ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವುದಕ್ಕೆ ಅನುಕೂಲವಾಗುವುದು. ಹೀಗೆ ಸಮಾನತ್ವವುಂಟಾಗುವುದು.
Kannada BSI Bible 2016
ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ; ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಾನತ್ವವಿರಬೇಕೆಂಬದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆಯನ್ನು ನೀಗಿಸುತ್ತದೆ. ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು.
Kannada Bible (KNCL) BSI 2016
ಈ ಕಾಲದಲ್ಲಿ ನಿಮಗೆ ಸಮೃದ್ಧಿಯಾಗಿರುವುದರಿಂದ ಅವರ ಕೊರತೆಯನ್ನು ನೀವು ನೀಗಿಸಬೇಕು. ಮುಂದಕ್ಕೆ ಅವರು ಸಮೃದ್ಧಿಯಿಂದಿರುವಾಗ, ನಿಮ್ಮ ಕೊರತೆಯನ್ನು ಅವರು ನೀಗಿಸುವರು. ಹೀಗೆ ನಿಮ್ಮಲ್ಲಿ ಸಮಾನತೆ ಉಂಟಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸದ್ಯದಲ್ಲಿ ನಿಮ್ಮ ಸಮೃದ್ಧಿಯು ಅವರ ಕೊರತೆಯನ್ನು ನೀಗಿಸುವುದು. ಅನಂತರ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವುದು. ಆಗ ಸಮಾನತೆಯ ಗುರಿಯು ಉಂಟಾಗುವುದು.