2 Corinthians 8:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಕೇಳಿಕೊಂಡ ಕಾರ್ಯಗಳನ್ನು ಮಾಡಲು ತೀತನು ಒಪ್ಪಿಕೊಂಡನು. ನಿಮ್ಮ ಬಳಿಗೆ ಬರಲು ಅವನು ಅತ್ಯಾಸಕ್ತನಾಗಿದ್ದನು. ಇದು ಅವನ ಸ್ವಂತ ಆಲೋಚನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ಅವನು ಒಪ್ಪಿದ್ದನಲ್ಲದೆ ಅತ್ಯಾಸಕ್ತನಾಗಿದ್ದು, ತನ್ನ ಸ್ವಚಿತ್ತದಿಂದ ನಿಮ್ಮ ಬಳಿಗೆ ಬಂದನು.
Kannada BSI Bible 2016
ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ನಿಜ ವಾಗಿಯೂ ಒಪ್ಪಿದ್ದಲ್ಲದೆ ಅತ್ಯಾಸಕ್ತನಾಗಿದ್ದು ತನ್ನಷ್ಟಕ್ಕೆ ತಾನೇ ನಿಮ್ಮ ಬಳಿಗೆ ಬಂದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ಅವನು ಒಪ್ಪಿದ್ದಲ್ಲದೆ ಅತ್ಯಾಸಕ್ತನಾಗಿದ್ದು ತನ್ನಷ್ಟಕ್ಕೆ ತಾನೇ ನಿಮ್ಮ ಬಳಿಗೆ ಬರುವದಕ್ಕೆ ಹೊರಟಿದ್ದಾನೆ.
Kannada Bible (KNCL) BSI 2016
ನಿಮ್ಮ ಬಳಿಗೆ ಹೋಗಬೇಕೆಂದು ಕೇಳಿಕೊಂಡಾಗ ಆತನು ಕೂಡಲೇ ಸಮ್ಮತಿಸಿದನು. ಅಷ್ಟೇ ಅಲ್ಲ, ನಿಮಗೆ ನೆರವಾಗಲು, ನಿಮ್ಮ ಬಳಿಗೆ ಬರಲು ಆತನೇ ಸ್ವಂತ ಇಷ್ಟದಿಂದ ಹೊರಟಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ವಿನಂತಿಯನ್ನು ತೀತನು ಒಪ್ಪಿಕೊಂಡದ್ದು ಮಾತ್ರವಲ್ಲದೆ, ತನ್ನ ಸ್ವಂತ ಇಚ್ಛೆಯಿಂದ ನಿಮ್ಮಲ್ಲಿಗೆ ಬರಲು ಆಸಕ್ತಿಯಿಂದ ಹೊರಟಿರುತ್ತಾನೆ.