2 Corinthians 8:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲಾ ಸಭೆಗಳಲ್ಲಿ ಹೊಗಳಿಕೆಗೆ ಪಾತ್ರನಾಗಿರುವ ಒಬ್ಬ ಸಹೋದರನನ್ನು ತೀತನೊಡನೆ ಕಳುಹಿಸುತ್ತಿದ್ದೇವೆ. ಈ ಸಹೋದರನು ಸುವಾರ್ತಾಸೇವೆಯ ವಿಷಯದಲ್ಲಿ ಕೀರ್ತಿಪಡೆದಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಜೊತೆಯಲ್ಲಿ ಮತ್ತೊಬ್ಬ ಸಹೋದರನನ್ನು ಕಳುಹಿಸಿದ್ದೇವೆ. ಈ ಸಹೋದರನು ಸುವಾರ್ತಾ ಸೇವೆಯಲ್ಲಿ ಎಲ್ಲಾ ಸಭೆಗಳೊಳಗೆ ಕೀರ್ತಿ ಪಡೆದುಕೊಂಡವನಾಗಿದ್ದಾನೆ.
Kannada BSI Bible 2016
ಇದಲ್ಲದೆ ಸುವಾರ್ತೆಯ ವಿಷಯದಲ್ಲಿ ಎಲ್ಲಾ ಸಭೆಗಳಲ್ಲಿಯೂ ಹೆಸರುಗೊಂಡಿದ್ದ ಸಹೋದರನನ್ನು ಅವನ ಜೊತೆ ಯಲ್ಲಿ ಕಳುಹಿಸಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಜೊತೆಯಲ್ಲಿ ಮತ್ತೊಬ್ಬ ಸಹೋದರನನ್ನು ಕಳುಹಿಸಿದ್ದೇವೆ; ಈ ಸಹೋದರನು ಸುವಾರ್ತಾಸೇವೆಯಲ್ಲಿ ಎಲ್ಲಾ ಸಭೆಗಳೊಳಗೆ ಕೀರ್ತಿಪಡಕೊಂಡವನಾಗಿದ್ದಾನೆ.
Kannada Bible (KNCL) BSI 2016
ಆತನ ಸಂಗಡ ಇನ್ನೊಬ್ಬ ಸಹೋದರನನ್ನು ಕಳುಹಿಸುತ್ತಿದ್ದೇವೆ. ಈತನು ಶುಭಸಂದೇಶವನ್ನು ಸಾರುವುದರಲ್ಲಿ ಎಲ್ಲ ಸಭೆಗಳಿಂದ ಪ್ರಶಂಸೆ ಪಡೆದಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನೊಂದಿಗೆ ಇನ್ನೊಬ್ಬ ಸಹೋದರನನ್ನೂ ಕಳುಹಿಸುತ್ತಿದ್ದೇನೆ. ಆ ಸಹೋದರನು ಮಾಡಿದ ಸುವಾರ್ತೆ ಸೇವೆಯನ್ನು ಎಲ್ಲಾ ಸಭೆಗಳವರು ಪ್ರಶಂಶಿಸಿದ್ದಾರೆ.