2 Corinthians 8:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಲ್ಲದೆ, ನಾವು ಈ ಸಹಾಯಧನವನ್ನು ತೆಗೆದುಕೊಂಡು ಹೋಗುವಾಗ ನಮ್ಮ ಸಂಗಡವಿರುವುದಕ್ಕಾಗಿ ಸಭೆಗಳವರು ಈ ಸಹೋದರನನ್ನು ಆಯ್ಕೆಮಾಡಿದ್ದಾರೆ. ದೇವರ ಮಹಿಮೆಗಾಗಿಯೂ ಮತ್ತು ಸಹಾಯ ಮಾಡಲು ನಿಜವಾಗಿ ಬಯಸುತ್ತೇವೆ ಎಂಬುದನ್ನು ತೋರಿಸುವುದಕ್ಕಾಗಿಯೂ ಈ ಸೇವಾಕಾರ್ಯವನ್ನು ಮಾಡುತ್ತಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದು ಮಾತ್ರವಲ್ಲದೆ, ಕರ್ತನ ಮಹಿಮೆಗಾಗಿ ಮತ್ತು ನಮ್ಮ ಸಿದ್ಧ ಮನಸ್ಸನ್ನು ತೋರಿಸುವುದಕ್ಕಾಗಿ ನಾವು ನಡಿಸುವ ಧರ್ಮಕಾರ್ಯದ ಸಂಬಂಧವಾಗಿ ನಮ್ಮ ಸಂಗಡ ಪ್ರಯಾಣಮಾಡುವಂತೆ ಸಭೆಗಳಿಂದ ಇವನು ಆರಿಸಲ್ಪಟ್ಟಿದ್ದಾನೆ.
Kannada BSI Bible 2016
ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ಮಾತ್ರವಲ್ಲದೆ ನಾವು ನಡಿಸುವ ಈ ಧರ್ಮಕಾರ್ಯ ಸಂಬಂಧವಾಗಿ ಸಭೆಗಳವರು ಈತನನ್ನು ನಮ್ಮ ಸಂಗಡ ಪ್ರಯಾಣಮಾಡುವಂತೆ ಗೊತ್ತುಮಾಡಿದ್ದಾರೆ. ಅವರು ಹೀಗೆ ಮಾಡಿದ್ದರಿಂದ ಕರ್ತನಿಗೆ ಘನವೂ ನಮ್ಮಲ್ಲಿ ಸಿದ್ಧಮನಸ್ಸೂ ಉಂಟಾಗುವದು.
Kannada Bible (KNCL) BSI 2016
ಇದಷ್ಟೇ ಅಲ್ಲದೆ, ಪ್ರಭುವಿನ ಮಹಿಮೆ ಬೆಳಗುವಂತೆಯೂ ಇತರರಿಗೆ ನೆರವಾಗಬೇಕೆಂಬ ಸದುದ್ದೇಶದಿಂದಲೂ ನಾವು ಕೈಗೊಂಡಿರುವ ಸೇವಾಕಾರ್ಯದಲ್ಲಿ ನಮ್ಮ ಸಂಗಡ ಪ್ರಯಾಣಮಾಡಲೆಂದು ಸಭೆಯವರು ಈತನನ್ನು ನೇಮಕಮಾಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲದೆ, ಕರ್ತ ಯೇಸುವಿನ ಮಹಿಮೆಗಾಗಿಯೂ ಸಹಾಯಮಾಡಬೇಕೆಂಬ ಸದುದ್ದೇಶ ತೋರಿಸುವುದಕ್ಕಾಗಿಯೂ ನಾವು ಸೇವೆಯನ್ನು ನಿರ್ವಹಿಸುತ್ತೇವೆ. ಇದಕ್ಕಾಗಿಯೇ, ನಮ್ಮ ಜೊತೆ ಬಂದು ಸಹಾಯಮಾಡಲು ಸಭೆಗಳಿಂದ ಆಯ್ಕೆಯಾದವನು ಆ ಸಹೋದರನು.