2 Corinthians 8:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ವಿಶ್ವಾಸಿಗಳು ಅತೀವ ಕಷ್ಟಗಳಿಂದ ಪರೀಕ್ಷಿಸಲ್ಪಟ್ಟಿದ್ದಾರೆ. ಅವರು ಬಹಳ ಬಡಜನರು. ಆದರೆ ಅವರು ತಮ್ಮ ಮಹಾ ಆನಂದದಿಂದ ಬಹಳವಾಗಿ ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
Kannada BSI Bible 2016
ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸಭೆಗಳವರು ಬಹಳ ಹಿಂಸೆ ತಾಳುವವರಾದರೂ ಮತ್ತು ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
Kannada Bible (KNCL) BSI 2016
ಈ ಸಭೆಗಳವರು ಕಷ್ಟಸಂಕಟಗಳ ಕುಲುಮೆಯಲ್ಲಿ ಬೆಂದಿದ್ದರೂ ಹರ್ಷಭರಿತರಾಗಿದ್ದಾರೆ. ಕಡುಬಡತನದಲ್ಲಿ ನರಳುತ್ತಿದ್ದರೂ ಅಪಾರ ಔದಾರ್ಯದಿಂದ ನಡೆದುಕೊಳ್ಳುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಘೋರ ಹಿಂಸೆಯ ನಡುವೆಯಿದ್ದರೂ ಕಡುಬಡತನದಲ್ಲಿ ಬಳಲುತ್ತಿದ್ದರೂ ಅವರು ಬಹಳ ಸಂತೋಷದಿಂದ, ಉದಾರಮನಸ್ಸಿನಿಂದ ಕೊಡುವವರಾಗಿದ್ದಾರೆ.