2 Corinthians 8:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೇರಳವಾದ ಈ ಸಹಾಯಧನವನ್ನು ನಾವು ನೋಡಿಕೊಳ್ಳುವ ಬಗ್ಗೆ ಟೀಕಿಸಲು ಯಾರಿಗೂ ಅವಕಾಶ ಕೊಡಬಾರದೆಂದು ಎಚ್ಚರಿಕೆಯಿಂದಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಸಂಗ್ರಹಿಸುತ್ತಿರುವಂತಹ ಈ ಉದಾರ ಕೊಡುಗೆಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದಕೊಡಬಾರದು.
Kannada BSI Bible 2016
ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಪಾರುಪತ್ಯಮಾಡುವ ಈ ದ್ರವ್ಯಸಂಚಯದ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದವಿರಬಾರದು.
Kannada Bible (KNCL) BSI 2016
ನಮ್ಮ ವಶಕ್ಕೆ ಒಪ್ಪಿಸಲಾಗಿರುವ ಈ ಉದಾರ ಕೊಡುಗೆಯ ವಿತರಣೆಯಲ್ಲಿ ಯಾರೂ ನಮ್ಮ ಮೇಲೆ ತಪ್ಪುಹೊರಿಸಲು ಆಸ್ಪದವಿರಕೂಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ನಮ್ಮ ಕೈಗೆ ಒಪ್ಪಿಸಲಾದ ಈ ಉದಾರ ಕೊಡುಗೆಯ ವಿತರಣೆಯ ಕಾರ್ಯದಲ್ಲಿ ಯಾರೂ ನಮ್ಮ ಮೇಲೆ ತಪ್ಪು ಹೊರಿಸಲು ಆಸ್ಪದವಿರಕೂಡದು.