2 Corinthians 8:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಲ್ಲದೆ, ಸಹಾಯ ಮಾಡಲು ಯಾವಾಗಲೂ ಸಿದ್ಧನಾಗಿರುವ ನಮ್ಮ ಸಹೋದರನನ್ನು ಅವರೊಂದಿಗೆ ಕಳುಹಿಸಿಕೊಡುತ್ತಿದ್ದೇವೆ. ಅವನು ಅನೇಕ ವಿಧದಲ್ಲಿ ತನ್ನನ್ನು ನಿರೂಪಿಸಿದ್ದಾನೆ. ಈಗ ಅವನಿಗೆ ನಿಮ್ಮಲ್ಲಿ ಹೆಚ್ಚು ಭರವಸೆ ಇರುವುದರಿಂದ ಮತ್ತಷ್ಟು ಸಹಾಯ ಮಾಡಲು ಬಯಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರಿಬ್ಬರ ಸಂಗಡ ನಮ್ಮ ಸಹೋದರರಲ್ಲಿ ಮತ್ತೊಬ್ಬನನ್ನು ಕಳುಹಿಸಿದ್ದೇವೆ; ನಾವು ಅನೇಕ ಸಮಯದಲ್ಲಿಯೂ, ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತನೆಂದು ತಿಳಿದುಕೊಂಡಿದ್ದೇವೆ; ಈಗ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.
Kannada BSI Bible 2016
ಅವರ ಸಂಗಡ ನಮ್ಮ ಸಹೋದರನನ್ನು ಕಳುಹಿಸಿದ್ದೇವೆ;ನಾವು ಅನೇಕ ಸಮಯಗಳಲ್ಲಿಯೂ ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತಿಯುಳ್ಳವನೆಂದು ತಿಳುಕೊಂಡಿದ್ದೇವೆ; ಈಗಲಾ ದರೋ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರಿಬ್ಬರ ಸಂಗಡ ನಮ್ಮ ಸಹೋದರರಲ್ಲಿ ಮತ್ತೊಬ್ಬನನ್ನು ಕಳುಹಿಸಿದ್ದೇವೆ; ನಾವು ಅನೇಕ ಸಮಯಗಳಲ್ಲಿಯೂ ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತನೆಂದು ತಿಳುಕೊಂಡಿದ್ದೇವೆ; ಈಗಲಾದರೋ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.
Kannada Bible (KNCL) BSI 2016
ಇವರಿಬ್ಬರ ಸಂಗಡ ಮತ್ತೊಬ್ಬ ಸಹೋದರನನ್ನೂ ಕಳುಹಿಸುತ್ತಿದ್ದೇವೆ. ಈತನು ಆಸಕ್ತಿ ಉಳ್ಳವನೆಂದು ಅನುಭವದಿಂದ ಕಂಡುಕೊಂಡಿದ್ದೇವೆ. ನಿಮ್ಮಲ್ಲಿ ಪೂರ್ಣ ಭರವಸೆಯಿಟ್ಟು ನಿಮಗೆ ನೆರವಾಗಲು ಆತನು ಹೆಚ್ಚು ಉತ್ಸುಕನಾಗಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರಿಬ್ಬರ ಜೊತೆಯಲ್ಲಿ ನಾವು ನಮ್ಮ ಅನೇಕ ಅನುಭವಗಳಿಂದ ಆಸಕ್ತಿಯುಳ್ಳವನೆಂಬುದನ್ನು ದೃಢಪಡಿಸಿಕೊಂಡ ಬೇರೊಬ್ಬ ಸಹೋದರನನ್ನೂ ಕಳುಹಿಸುತ್ತಿದ್ದೇವೆ. ಅವನು ನಿಮ್ಮ ಬಗ್ಗೆ ಪೂರ್ಣ ಭರವಸೆಯನ್ನಿಟ್ಟು ನಿಮಗೆ ನೆರವಾಗಲು ಇನ್ನೂ ಉತ್ಸುಕತೆಯಲ್ಲಿದ್ದಾನೆ.