2 Corinthians 8:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ತೀತನ ಬಗ್ಗೆ ಹೇಳುವುದೇನೆಂದರೆ, ಅವನು ನನ್ನ ಜೊತೆಕೆಲಸಗಾರನಾಗಿದ್ದಾನೆ. ನಿಮಗೆ ಸಹಾಯ ಮಾಡಲು ಅವನು ನನ್ನೊಂದಿಗೆ ಕೆಲಸಮಾಡುತ್ತಿದ್ದಾನೆ. ಇತರ ಸಹೋದರರ ಬಗ್ಗೆ ನಾನು ಹೇಳುವುದೇನೆಂದರೆ, ಅವರು ಸಭೆಗಳಿಂದ ಕುಳುಹಿಸಲ್ಪಟ್ಟವರಾಗಿದ್ದಾರೆ ಮತ್ತು ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುವಂಥವರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೀತನನ್ನು ಕುರಿತಾಗಿ ಹೇಳುವುದಾದರೆ, ಅವನು ನನ್ನ ಪಾಲುಗಾರನೂ ನಿಮ್ಮ ಪ್ರಯೋಜನಕ್ಕಾಗಿ ನನಗೆ ಸಹಕಾರಿಯೂ ಆಗಿದ್ದಾನೆ; ಆ ಸಹೋದರರನ್ನು ಕುರಿತಾಗಿ ಹೇಳುವುದಾದರೆ, ಅವರು ಸಭೆಗಳಿಂದ ಕಳುಹಿಸಲ್ಪಟ್ಟವರೂ ಮತ್ತು ಕ್ರಿಸ್ತನ ಮಹಿಮೆಯನ್ನು ಪ್ರಕಾಶಪಡಿಸುವವರೂ ಆಗಿದ್ದಾರೆ.
Kannada BSI Bible 2016
ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ವಿಷಯವಾಗಿ ನನಗೆ ಜೊತೆ ಸಹಕಾರಿಯೂ ಆಗಿದ್ದಾನೆ; ನಮ್ಮ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳ ಸೇವಕರೂ ಕ್ರಿಸ್ತನಮಹಿಮೆಯೂ ಆಗಿದ್ದಾರೆ.ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ಪ್ರಯೋಜನಕ್ಕಾಗಿ ನನಗೆ ಸಹಕಾರಿಯೂ ಆಗಿದ್ದಾನೆ; ಆ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳಿಂದ ಕಳುಹಿಸಲ್ಪಟ್ಟವರೂ ಕ್ರಿಸ್ತನ ಮಹಿಮೆಯನ್ನು ಪ್ರಕಾಶಪಡಿಸುವವರೂ ಆಗಿದ್ದಾರೆ.
Kannada Bible (KNCL) BSI 2016
ತೀತನ ವಿಷಯವಾಗಿ ಹೇಳುವುದಾದರೆ, ಆತನು ನನ್ನ ಸಹೋದ್ಯೋಗಿ; ನಿಮ್ಮ ಸೇವೆಯಲ್ಲಿ ನನ್ನ ಸಹಕಾರಿ, ಆತನ ಸಂಗಡ ಬರುತ್ತಿರುವ ಇತರ ಸಹೋದರರು ಸಭೆಗಳ ಪ್ರತಿನಿಧಿಗಳು. ಕ್ರಿಸ್ತಯೇಸುವಿನ ಮಹಿಮೆಯನ್ನು ಬೆಳಗುವಂಥವರು ಅವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತೀತನು ನನ್ನ ಸಹೋದ್ಯೋಗಿ ಮತ್ತು ನಿಮ್ಮ ನಡುವೆಯಿರುವ ನನ್ನ ಸಹಕಾರಿಯಾಗಿರುತ್ತಾನೆ. ಇವನ ಸಂಗಡ ಬರುತ್ತಿರುವ ನಮ್ಮ ಸಹೋದರರು ಸಭೆಗಳ ಪ್ರತಿನಿಧಿಗಳಾಗಿದ್ದಾರೆ ಮತ್ತು ಕ್ರಿಸ್ತ ಯೇಸುವಿನ ಮಹಿಮೆಗೆ ಕಾರಣಸ್ಥರೂ ಆಗಿದ್ದಾರೆ.