2 Corinthians 8:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನಿಮ್ಮಲ್ಲಿ ನಿಜವಾಗಿಯೂ ಪ್ರೀತಿಯಿದೆ ಎಂಬುದನ್ನು ಈ ಜನರಿಗೆ ತೋರಿಸಿಕೊಡಿರಿ. ನಾವು ನಿಮ್ಮ ವಿಷಯದಲ್ಲಿ ಯಾಕೆ ಹೆಮ್ಮೆಪಡುತ್ತೇವೆಂಬುದನ್ನು ಇವರಿಗೆ ತೋರಿಸಿಕೊಡಿರಿ. ಆಗ ಎಲ್ಲಾ ಸಭೆಗಳವರು ಅದನ್ನು ನೋಡಲು ಸಾಧ್ಯವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಇವರನ್ನು ಪ್ರೀತಿಯಿಂದ ನೋಡಿಕೊಳ್ಳಿ. ನಾವು ನಿಮ್ಮನ್ನು ಹೊಗಳಿದ್ದಕ್ಕೆ ತಕ್ಕಂತೆ ನಡೆದುಕೊಂಡು ಸಭೆಗಳಿಗೆ ನಿಮ್ಮ ಯೋಗ್ಯತೆಯನ್ನು ಮನದಟ್ಟು ಮಾಡಿಕೊಡಿರಿ.
Kannada BSI Bible 2016
ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನೂ ನಿಮ್ಮನ್ನು ನಾವು ಹೊಗಳಿದ್ದು ನ್ಯಾಯವೆಂಬದನ್ನೂ ಇವರಿಗೂ ಸಭೆಗಳಿಗೂ ತೋರಿಸಿಕೊಡಿರಿ.
Kannada Bible (KNCL) BSI 2016
ಆದ್ದರಿಂದ ಇವರನ್ನು ಪ್ರೀತಿಯಿಂದ ನೋಡಿಕೊಳ್ಳಿ. ನಾವು ನಿಮ್ಮನ್ನು ಹೊಗಳಿದ್ದಕ್ಕೆ ತಕ್ಕಂತೆ ನಡೆದುಕೊಂಡು ಸಭೆಗಳಿಗೆ ನಿಮ್ಮ ಯೋಗ್ಯತೆಯನ್ನು ಮನದಟ್ಟುಮಾಡಿಕೊಡಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ, ಇವರೊಂದಿಗೆ ನಿಮಗಿರುವ ಪ್ರೀತಿಯನ್ನೂ ನಿಮ್ಮ ಬಗ್ಗೆಯಿರುವ ನಮ್ಮ ಹೊಗಳಿಕೆಯನ್ನೂ ಸಭೆಗಳವರ ಮುಂದೆ ರುಜುಪಡಿಸಿ ತೋರಿಸಿರಿ.