2 Corinthians 8:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಕೊಟ್ಟಿದ್ದಾರೆಂದು ನಾನು ನಿಮಗೆ ಹೇಳುತ್ತೇನೆ. ಅವರು ತಮ್ಮ ಶಕ್ತಿಮೀರಿ ಕೊಟ್ಟಿದ್ದಾರೆ. ಅವರು ತಾವಾಗಿಯೇ ಕೊಟ್ಟರು. ಕೊಡಬೇಕೆಂದು ಅವರಿಗೆ ಯಾರೂ ಹೇಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತಮ್ಮ ಶಕ್ತಿಯನುಸಾರವಾಗಿ ಮಾತ್ರ ಕೊಡದೆ ಶಕ್ತಿಯನ್ನು ಮೀರಿ ತಮ್ಮಿಷ್ಟಕ್ಕೆ ತಾವೇ ಉದಾರವಾಗಿ ದಾನಮಾಡಿದರು.
Kannada BSI Bible 2016
ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಶಕ್ತ್ಯನುಸಾರವಾಗಿ ಮಾತ್ರ ಕೊಡದೆ ಶಕ್ತಿಯನ್ನು ಮೀರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.
Kannada Bible (KNCL) BSI 2016
ತಮ್ಮ ಶಕ್ತಿಗನುಸಾರವಾಗಿ ಮಾತ್ರವಲ್ಲ, ಕೆಲವೊಮ್ಮೆ ಶಕ್ತಿಮೀರಿಯೂ ನೀಡಿದ್ದಾರೆಂದು ನಾನು ಖಂಡಿತವಾಗಿ ಹೇಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತಮಗೆ ಸಾಧ್ಯವಾದಷ್ಟು ಕೊಟ್ಟಿದ್ದಾರೆ. ಮಾತ್ರವಲ್ಲದೇ ತಮ್ಮ ಶಕ್ತಿ ಮೀರಿ ಕೊಟ್ಟಿದ್ದಾರೆ ಎಂಬುದಕ್ಕೆ ನಾನೇ ಸಾಕ್ಷಿಯಾಗಿದ್ದೇನೆ.