2 Corinthians 8:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವೆಂದೂ ನೆನಸಿಲ್ಲದ ರೀತಿಯಲ್ಲಿ ಅವರು ಕೊಟ್ಟರು. ಅವರು ತಮ್ಮ ಹಣವನ್ನು ನಮಗೆ ಕೊಡುವುದಕ್ಕಿಂತ ಮೊದಲು ತಮ್ಮನ್ನೇ ಪ್ರಭುವಿಗೂ ನಮಗೂ ಒಪ್ಪಿಸಿಕೊಟ್ಟರು. ದೇವರು ಬಯಸುವುದು ಇದನ್ನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಇದನ್ನು ನಿರೀಕ್ಷಿಸದ ರೀತಿಯಲ್ಲಿ ಅವರು ಕೊಡದೆ, ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿದರು.
Kannada BSI Bible 2016
ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ನೆನಸಿದ್ದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿದರು.
Kannada Bible (KNCL) BSI 2016
ಇದನ್ನು, ನಾವು ನಿರೀಕ್ಷಿಸಲೇ ಇಲ್ಲ! ಮೊಟ್ಟಮೊದಲು ಅವರು ತಮ್ಮನ್ನೇ ಪ್ರಭುವಿಗೆ ಸಮರ್ಪಿಸಿದರು. ಅನಂತರ ದೈವಚಿತ್ತಕ್ಕೆ ಅನುಗುಣವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವೆಲ್ಲವನ್ನೂ ನಾವು ನೆನಸಿದ್ದಕ್ಕಿಂತಲೂ ಅವರು ಹೆಚ್ಚಾಗಿಯೇ ಮಾಡಿದರು. ಹೇಗೆಂದರೆ ಮೊದಲು ಅವರು ತಮ್ಮನ್ನೇ ಕರ್ತ ಯೇಸುವಿಗೆ ಒಪ್ಪಿಸಿಕೊಟ್ಟರು. ಅನಂತರ ದೇವರ ಚಿತ್ತಾನುಸಾರವಾಗಿ ತಮ್ಮನ್ನು ನಮಗೂ ಒಪ್ಪಿಸಿಕೊಟ್ಟರು.