2 Corinthians 8:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ, ವಿಶೇಷವಾದ ಈ ಕೃಪಾಕಾರ್ಯವನ್ನು ಪೂರೈಸಲು ನಿಮಗೆ ಸಹಾಯ ಮಾಡಬೇಕೆಂದು ನಾವು ತೀತನನ್ನು ಕೇಳಿಕೊಂಡೆವು. ಈ ಕಾರ್ಯವನ್ನು ಪ್ರಾರಂಭಿಸಿದವನು ತೀತನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೀತನು ಪ್ರಾರಂಭಿಸಿದ ಹಾಗೆಯೇ ಧರ್ಮಕಾರ್ಯವನ್ನು ಪೂರೈಸಬೇಕೆಂದು ನಾವು ಅವನನ್ನು ಕೇಳಿಕೊಂಡಿದ್ದೇವೆ.
Kannada BSI Bible 2016
ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಈ ಧರ್ಮಕಾರ್ಯವನ್ನು ಮಾಡುವದಕ್ಕೆ ಮೊದಲು ನಿಮ್ಮನ್ನು ಪ್ರೇರೇಪಿಸಿದ ತೀತನು ತಿರಿಗಿ ನಿಮ್ಮ ಬಳಿಗೆ ಬಂದು ಅದನ್ನು ತೀರಿಸಬೇಕೆಂದು ನಾವು ಅವನನ್ನು ಕೇಳಿಕೊಂಡಿದ್ದೇವೆ.
Kannada Bible (KNCL) BSI 2016
ಇಂಥ ಪ್ರೀತಿಮಯ ಸೇವಾಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ತೀತನು ಅದನ್ನು ಮುಂದುವರಿಸಿ, ಪೂರ್ಣಗೊಳಿಸಬೇಕೆಂದು ನಾವು ಆತನನ್ನು ಕೇಳಿಕೊಂಡಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರಲಾಗಿ, ತೀತನು ಪ್ರಾರಂಭಿಸಿದ ಈ ದಾನ ಕಾರ್ಯವನ್ನು ನಿಮ್ಮಲ್ಲಿ ಸಹ ಪೂರ್ಣಗೊಳಿಸಬೇಕೆಂದು ನಾವು ಅವನನ್ನು ಬಹಳವಾಗಿ ಕೇಳಿಕೊಂಡೆವು.