2 Corinthians 8:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಪ್ರತಿಯೊಂದರಲ್ಲಿಯೂ ಅಂದರೆ, ನಂಬಿಕೆಯಲ್ಲಿ, ಮಾತಾಡುವುದರಲ್ಲಿ, ಜ್ಞಾನದಲ್ಲಿ, ಸಹಾಯಮಾಡಬೇಕೆಂಬ ಆಸಕ್ತಿಯಲ್ಲಿ ಮತ್ತು ನಮ್ಮಿಂದ ಕಲಿತುಕೊಂಡ ಪ್ರೀತಿಯಲ್ಲಿ ಶ್ರೀಮಂತರಾಗಿದ್ದೀರಿ. ಆದ್ದರಿಂದ ಕೃಪಾಕಾರ್ಯದಲ್ಲಿಯೂ ನೀವು ಶ್ರೀಮಂತರಾಗಿರಬೇಕೆಂದು ನಾವು ಬಯಸುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ದೇವರ ಮೇಲಣ ನಂಬಿಕೆಯಲ್ಲಿ, ವಾಕ್ಚಾತುರ್ಯದಲ್ಲಿ, ಜ್ಞಾನದಲ್ಲಿ, ಸಕಲ ವಿಧವಾದ ಆಸಕ್ತಿಯಲ್ಲಿ ಮತ್ತು ನಮ್ಮ ಪ್ರೇರಣೆಯಿಂದ ನಿಮ್ಮಲ್ಲಿ ಹುಟ್ಟಿದ ಪ್ರೀತಿಯಲ್ಲಿ ಹೇಗೆ ಸಮೃದ್ಧರಾಗಿದ್ದೀರೋ ಹಾಗೆಯೇ ಈ ಧರ್ಮಕಾರ್ಯದಲ್ಲಿಯೂ ಸಮೃದ್ಧರಾಗಿ ಮುಂದುವರೆಯಿರಿ.
Kannada BSI Bible 2016
ಆದದರಿಂದ ನೀವು ಎಲ್ಲವುಗಳಲ್ಲಿ ಅಂದರೆ ನಂಬಿಕೆಯಲ್ಲಿಯೂ ಮಾತಿ ನಲ್ಲಿಯೂ ಜ್ಞಾನದಲ್ಲಿಯೂ ಎಲ್ಲಾ ಆಸಕ್ತಿಯಲ್ಲಿಯೂ ನಮ್ಮ ಕಡೆಗಿರುವ ನಿಮ್ಮ ಪ್ರೀತಿಯಲ್ಲಿಯೂ ಸಮೃದ್ಧರಾಗಿರುವಂತೆಯೇ ಈ ಕೃಪೆಯಲ್ಲಿಯೂ ಸಮೃದ್ಧರಾಗಿರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ದೇವರ ಮೇಲಣ ನಂಬಿಕೆ ವಾಕ್ಚಾತುರ್ಯ ಜ್ಞಾನ ಸಕಲವಿಧವಾದ ಆಸಕ್ತಿ ನಮ್ಮ ಪ್ರೇರಣೆಯಿಂದ ನಿಮ್ಮಲ್ಲಿ ಹುಟ್ಟಿದ ಪ್ರೀತಿ ಇವೇ ಮೊದಲಾದ ಎಲ್ಲಾ ವಿಷಯಗಳಲ್ಲಿ ಹೇಗೆ ಸಮೃದ್ಧರಾಗಿದ್ದೀರೋ ಹಾಗೆಯೇ ಈ ಧರ್ಮಕಾರ್ಯದಲ್ಲಿಯೂ ಸಮೃದ್ಧರಾಗಿರಿ.
Kannada Bible (KNCL) BSI 2016
ವಿಶ್ವಾಸ, ವಾಕ್ಚಾತುರ್ಯ, ಜ್ಞಾನ, ಶ್ರದ್ಧೆ, ನಮ್ಮ ಬಗ್ಗೆ ನಿಮಗಿರುವ ಪ್ರೀತಿ - ಈ ಎಲ್ಲಾ ವಿಷಯಗಳಲ್ಲೂ ನೀವು ಸಮೃದ್ಧರಾಗಿದ್ದೀರಿ. ಹಾಗೆಯೇ ಈ ಸೇವಾಕಾರ್ಯದಲ್ಲೂ ಸಮೃದ್ಧರಾಗಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೇಗೆ ನೀವು ವಿಶ್ವಾಸ, ವಾಕ್ಚಾತುರ್ಯ, ತಿಳುವಳಿಕೆ, ಉತ್ಸಾಹ ಹಾಗೂ ನಮ್ಮ ಮೇಲೆ ನಿಮಗಿರುವ ಪ್ರೀತಿ, ಇವೆಲ್ಲವುಗಳಲ್ಲಿ ನೀವು ಸಮೃದ್ಧರಾಗಿದ್ದಂತೆ, ಈ ದಾನವೆಂಬ ಕೃಪಾಕಾರ್ಯದಲ್ಲಿಯೂ ಸಮೃದ್ಧರಾಗಿರಿ.