2 Corinthians 9:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಿತ್ತುವವನಿಗೆ ಬೀಜವನ್ನು ಕೊಡುವವನು ದೇವರೇ. ಆತನು ಆಹಾರಕ್ಕಾಗಿ ರೊಟ್ಟಿಯನ್ನು ಕೊಡುವನು. ಅಂತೆಯೇ, ದೇವರು ಆತ್ಮಿಕ ಬೀಜವನ್ನು ಕೊಡುವನು ಮತ್ತು ನಿಮ್ಮ ಬೀಜವನ್ನು ಬೆಳೆಯಮಾಡುವನು. ನಿಮ್ಮ ಒಳ್ಳೆಯ ಕ್ರಿಯೆಯಿಂದ ಆತನು ಮಹಾ ಸುಗ್ಗಿಯನ್ನು ಉಂಟುಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.
Kannada BSI Bible 2016
ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)
Kannada BSI JV (ಕನ್ನಡ ಸತ್ಯವೇದವು J.V. (BSI))
ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಆಹಾರವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.
Kannada Bible (KNCL) BSI 2016
ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಊಟವನ್ನೂ ಒದಗಿಸುವ ದೇವರು, ಬಿತ್ತನೆಗೆ ಬೇಕಾದ ಬೀಜವನ್ನು ನಿಮಗೂ ಕೊಟ್ಟು ಅದನ್ನು ಬೆಳೆಸುವರು. ನಿಮ್ಮ ದಾನಧರ್ಮದ ಫಲಗಳು ಸಮೃದ್ಧಿಗೊಳ್ಳುವಂತೆ ಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಊಟವನ್ನು ಒದಗಿಸುವ ದೇವರು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು, ಹೆಚ್ಚಿಸಿ ನಿಮ್ಮ ನೀತಿಯ ಸುಗ್ಗಿಯನ್ನು ವೃದ್ಧಿಪಡಿಸುವರು.