2 Corinthians 9:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾವಾಗಲೂ ಉದಾರವಾಗಿ ಕೊಡಬೇಕೆಂದು ದೇವರು ನಿಮ್ಮನ್ನು ಪ್ರತಿಯೊಂದು ವಿಷಯದಲ್ಲಿಯೂ ಶ್ರೀಮಂತರನ್ನಾಗಿ ಮಾಡುವನು. ನಮ್ಮ ಮೂಲಕವಾಗಿ ನೀವು ಕೊಡುವ ಸಹಾಯಧನದ ನಿಮಿತ್ತ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ.
Kannada BSI Bible 2016
ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡ ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟುಮಾಡುವದು.
Kannada Bible (KNCL) BSI 2016
ನೀವು ಸದಾ ಉದಾರಿಗಳಾಗಿರುವಂತೆ ನಿಮ್ಮನ್ನು ಎಲ್ಲಾ ವಿಧದಲ್ಲೂ ಸಿರಿವಂತರನ್ನಾಗಿ ಮಾಡುವರು. ನಿಮ್ಮ ಕೊಡುಗೆ ನಮ್ಮ ಸೇವೆಯ ಮೂಲಕ ಬೇರೆಯವರಿಗೆ ತಲುಪಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ಮಾಡುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಸದಾ ಉದಾರಿಗಳಾಗುವಂತೆ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿಯೂ ಸಿರಿವಂತರನ್ನಾಗಿ ಮಾಡುವನು. ನಿಮ್ಮ ಕೊಡುಗೆಯು ನಮ್ಮ ಸೇವೆಯ ಮೂಲಕ ಬೇರೆಯವರಿಗೆ ಮುಟ್ಟಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ನಡೆಸುವುದು.