2 Corinthians 9:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹಾಯ ಮಾಡಬೇಕೆಂಬ ಬಯಕೆಯು ನಿಮಗಿದೆಯೆಂದು ನನಗೆ ಗೊತ್ತಿದೆ. ಮಕೆದೋನಿಯದಲ್ಲಿ ಜನರಿಗೆ ನಿಮ್ಮ ಈ ವಿಷಯದಲ್ಲಿ ಹೆಮ್ಮೆಯಿಂದ ಹೇಳುತ್ತಲೇ ಇದ್ದೇನೆ. ಅಖಾಯದಲ್ಲಿರುವ ನೀವು ಕಳೆದ ವರ್ಷದಿಂದಲೂ ಕೊಡಲು ಸಿದ್ಧರಾಗಿದ್ದೀರೆಂದು ಅವರಿಗೆ ಹೇಳಿದೆನು. ನಿಮ್ಮಲ್ಲಿರುವ ಕೊಡಬೇಕೆಂಬ ಬಯಕೆಯು ಇಲ್ಲಿರುವ ಅನೇಕ ಜನರಲ್ಲಿ ಕೊಡಬೇಕೆಂಬ ಬಯಕೆಯನ್ನು ಉಂಟುಮಾಡಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಮನಸ್ಸಿನ ಬಯಕೆ ಏನೆಂಬುದು ನನಗೆ ಗೊತ್ತುಂಟು. ಕಳೆದ ವರ್ಷದಿಂದಲೂ ಅಖಾಯದವರು ಸಹಾಯಮಾಡುವುದಕ್ಕೆ ಸಿದ್ಧರಾಗಿದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು.
Kannada BSI Bible 2016
ನಿಮ್ಮ ಮನಸ್ಸು ಸಿದ್ದವಾಗಿದೆ ಎಂಬದು ನನಗೆ ಗೊತ್ತುಂಟು; ಒಂದು ವರುಷದ ಹಿಂದೆ ಅಕಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿ ದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ; ನಿಮ್ಮ ಆಸಕ್ತಿಯು ಬಹು ಜನರನ್ನು ಪ್ರೇರೇಪಿಸಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಮನಸ್ಸು ಸಿದ್ಧವಾಗಿದೆ ಎಂಬದು ನನಗೆ ಗೊತ್ತುಂಟು. ಒಂದು ವರುಷದ ಹಿಂದೆ ಅಖಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು.
Kannada Bible (KNCL) BSI 2016
ನೆರವು ನೀಡಲು ಸಿದ್ಧರಿದ್ದೀರೆಂದು ನನಗೆ ಚೆನ್ನಾಗಿ ಗೊತ್ತಿದೆ. “ಅಖಾಯದ ಸಹೋದರರು ಕಳೆದ ವರ್ಷದಿಂದಲೂ ನೆರವು ನೀಡಲು ಏರ್ಪಾಡುಮಾಡುತ್ತಿರುವರು,” ಎಂದು ಮಕೆದೋನಿಯರ ಮುಂದೆ ನಾನು ನಿಮ್ಮನ್ನು ಹೊಗಳಿದ್ದೇನೆ. ನಿಮ್ಮ ಉತ್ಸಾಹ ಅವರಲ್ಲಿ ಅನೇಕರನ್ನು ಹುರಿದುಂಬಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಖಾಯದಲ್ಲಿರುವ ನೀವು ಕಳೆದ ಒಂದು ವರ್ಷದಿಂದ ಉದಾರವಾಗಿ ದಾನ ಮಾಡಲು ಸಿದ್ಧರಾಗಿದ್ದೀರಿ ಎಂಬ ವಿಷಯವನ್ನು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳಿದ್ದೇನೆ. ನಿಮ್ಮ ಆಸಕ್ತಿಯನ್ನು ಕೇಳಿ ಮಕೆದೋನ್ಯದವರಲ್ಲಿ ಎಷ್ಟೋ ಮಂದಿ ಕಾರ್ಯರೂಪಕ್ಕೆ ಉತ್ತೇಜನಗೊಂಡಿರುತ್ತಾರೆ.