2 Corinthians 9:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಸಹೋದರರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡುತ್ತಿದ್ದೇನೆ. ನಿಮ್ಮ ಬಗ್ಗೆ ಈ ವಿಷಯದಲ್ಲಿ ಹೊಗಳಿದ್ದು ವ್ಯರ್ಥವಾಗುವುದು ನನಗೆ ಇಷ್ಟವಿಲ್ಲ. ನಾನು ಹೇಳಿಕೊಂಡಂತೆ ನೀವು ಸಿದ್ಧರಾಗಿರಬೇಕೆಂದು ಆಶಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ನಾವು ನಿಮ್ಮನ್ನು ಹೊಗಳಿದ್ದು ಆಧಾರರಹಿತವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧರಾಗಿರಬಹುದೆಂದು ಆ ಸಹೋದರರನ್ನು ಕಳುಹಿಸಿದ್ದೇನೆ.
Kannada BSI Bible 2016
ಆದರೂ ನಾವು ನಿಮ್ಮನ್ನು ಹೊಗಳಿದ್ದು ವ್ಯರ್ಥವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ನಾವು ನಿಮ್ಮನ್ನು ಹೊಗಳಿದ್ದು ನಿರಾಧಾರವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ.
Kannada Bible (KNCL) BSI 2016
ಆದರೂ ನಮ್ಮ ಹೊಗಳಿಕೆ ಸುಳ್ಳಾಗಬಾರದೆಂದು ನಾನು ಈ ಸಹೋದರರನ್ನು ಮುಂಚಿತವಾಗಿ ಕಳುಹಿಸುತ್ತಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಈ ವಿಷಯದಲ್ಲಿ ನಿಮ್ಮ ಬಗ್ಗೆ ನಮಗಿರುವ ಹೊಗಳಿಕೆಯು ಸುಳ್ಳಾಗಿರಬಾರದೆಂದು ಸಹೋದರರನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ನೀವು ಸಹ ನಾನು ನಿಮಗೆ ಹೇಳಿದಂತೆ, ಇದಕ್ಕಾಗಿ ಸಿದ್ಧರಾಗಿರುವಿರಿ ಎಂದು ಭಾವಿಸುತ್ತೇನೆ.