2 Corinthians 9:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದುವೇಳೆ ಮಕೆದೋನಿಯದ ಜನರಲ್ಲಿ ಯಾರಾದರೂ ನನ್ನೊಂದಿಗೆ ಬಂದಾಗ ನೀವು ಸಿದ್ಧರಾಗಿಲ್ಲದಿದ್ದರೆ ನಾವು ನಾಚಿಕೆಗೆ ಗುರಿಯಾಗುತ್ತೇವೆ. ನಿಮ್ಮ ವಿಷಯದಲ್ಲಿ ನಾವು ಬಹಳ ಭರವಸೆ ಇಟ್ಟಿದ್ದರಿಂದ ನಾವು ನಾಚಿಕೆಗೆ ಗುರಿಯಾಗುವೆವು (ಮತ್ತು ನೀವೂ ಸಹ ನಾಚಿಕೆಗೆ ಗುರಿಯಾಗುವಿರಿ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಸಿದ್ಧವಾಗದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬುದನ್ನು ಕಂಡು ನಮಗೆ ನಿಮ್ಮ ಮೇಲೆ ಇಂಥ ಭರವಸೆ ಇಟ್ಟಿದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ನಿಮಗೂ ನಾಚಿಕೆಯಾಗುವುದೆಂದು ನಾನು ಹೀಗೆ ಹೇಳುತ್ತೇನೆ.
Kannada BSI Bible 2016
ಸಿದ್ಧವಾಗಿರದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು;
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿದ್ಧವಾಗದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ನಿಮಗೂ ನಾಚಿಕೆಯಾಗುವದೆಂದು ನಾವು ಬೇರೆ ಹೇಳಬೇಕೇ.
Kannada Bible (KNCL) BSI 2016
ನಾನು ನಿಮಗೆ ಹೇಳಿರುವಂತೆ ನಿಮ್ಮ ಏರ್ಪಾಡೆಲ್ಲಾ ಮುಗಿದಿರಬೇಕು. ಇಲ್ಲದಿದ್ದರೆ ನಾನು ಬರುವಾಗ, ನನ್ನ ಜೊತೆಯಲ್ಲಿಯೇ ಮಕೆದೋನಿಯದ ಸಹೋದರರೂ ಬಂದು, ನೀವು ಸಿದ್ಧರಿಲ್ಲದೆ ಇರುವುದನ್ನು ಕಂಡರೆ ನೀವು ತಲೆತಗ್ಗಿಸಬೇಕಾಗುತ್ತದೆ. ನಿಮ್ಮಲ್ಲಿ ನಂಬಿಕೆ ಇಟ್ಟದ್ದಕ್ಕಾಗಿ ನಾನೂ ತಲೆ ತಗ್ಗಿಸಬೇಕಾಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಜೊತೆಯಲ್ಲಿ ಬಂದು, ನೀವು ಇನ್ನೂ ಸಿದ್ಧರಿಲ್ಲದೆ ಇರುವುದನ್ನು ಕಂಡರೆ, ನಿಮಗೆ ಬೇಸರವಾಗುವುದಲ್ಲದೆ, ನಿಮ್ಮ ಬಗ್ಗೆ ಭರವಸೆಯಿಟ್ಟಿರುವುದಕ್ಕೆ ನಾವು ಸಹ ನಾಚಿಕೆಪಡುವ ಸನ್ನಿವೇಶ ಬರಬಾರದು.