2 Corinthians 9:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನಾನು ಬರುವುದಕ್ಕಿಂತ ಮೊದಲು ನಿಮ್ಮ ಬಳಿಗೆ ಹೋಗುವಂತೆ ಈ ಸಹೋದರರನ್ನು ಕೇಳಿಕೊಳ್ಳಬೇಕೆಂದು ನಾನು ಆಲೋಚಿಸಿದೆನು. ನೀವು ವಾಗ್ದಾನ ಮಾಡಿದ ಸಹಾಯಧನವನ್ನು ಇವರು ಸಂಗ್ರಹಿಸುವರು. ಆಗ, ನಾವು ಬರುವಷ್ಟರಲ್ಲಿ ನಿಮ್ಮ ಸಹಾಯಧನವು ಸಿದ್ಧವಾಗಿರುವುದು. ಈ ಸಹಾಯಧನವು ನಿಮ್ಮ ಹೃತ್ಪೂರ್ವಕವಾದ ದಾನವೇ ಹೊರತು ಸಂಕಟದಿಂದ ಕೊಟ್ಟ ದಾನವಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಈ ಸಹೋದರರು ಮುಂಚಿತವಾಗಿ ನಿಮ್ಮ ಬಳಿಗೆ ಬಂದು ನೀವು ಮೊದಲೇ ವಾಗ್ದಾನಮಾಡಿದ ಕೊಡುಗೆಯನ್ನು ಸಿದ್ಧಪಡಿಸಲು ನಿಮಗೆ ಸಹಾಯಮಾಡುವಂತೆ ಇವರನ್ನು ಬೇಡಿಕೊಳ್ಳುವುದು ಅವಶ್ಯವೆಂದು ನನಗೆ ತೋಚಿತು. ಹೀಗೆ ಈ ದಾನ ಒತ್ತಾಯದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ದಾನ ಆಗಿರುತ್ತದೆ.
Kannada BSI Bible 2016
ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಕೊಡುತ್ತೇವೆಂದು ನೀವು ಮೊದಲು ಹೇಳಿದ ಧರ್ಮದ್ರವ್ಯವನ್ನು ಸಿದ್ಧಪಡಿಸಬೇಕೆಂಬದಾಗಿ ಇವರನ್ನು ಬೇಡಿಕೊಳ್ಳುವದು ಅವಶ್ಯವೆಂದು ನನಗೆ ತೋಚಿತು. ಹೀಗೆ ಆ ಹಣವು ಸುಲಿಗೆಯಂತೆ ಬಾರದೆ ಧರ್ಮಾರ್ಥವಾಗಿಯೇ ಸಿದ್ಧವಾಗುವದು.
Kannada Bible (KNCL) BSI 2016
ಆದ್ದರಿಂದಲೇ, ನೀವು ವಾಗ್ದಾನಮಾಡಿದ ಕೊಡುಗೆಯನ್ನು ಸಂಗ್ರಹಿಸುವ ಏರ್ಪಾಡನ್ನು ಮಾಡುವಂತೆ ಈ ಸಹೋದರರನ್ನು ನಮಗೆ ಮುಂಚಿತವಾಗಿಯೇ ನಿಮ್ಮ ಬಳಿಗೆ ಕಳುಹಿಸುವುದು ಉಚಿತವೆಂದು ನನಗೆ ತೋಚಿತು. ಹೀಗೆ ಈ ಕೊಡುಗೆ ಬಲಾತ್ಕಾರವಾದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ನಿಧಿ ಆಗಿರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಸಹೋದರರನ್ನು ಮುಂಚಿತವಾಗಿ ಹೋಗುವುದಕ್ಕೆ ನಾನು ಏರ್ಪಾಡು ಮಾಡಬೇಕಾಯಿತು. ಅವರು ಬಂದು ನೀವು ವಾಗ್ದಾನಮಾಡಿದ ಕೊಡುಗೆಯನ್ನು ಸಂಗ್ರಹಿಸುವ ಕಾರ್ಯವನ್ನು ಮುಗಿಸುವರು. ಹೀಗೆ ಈ ಉದಾರವಾಗಿರುವ ದಾನವು ಬಲಾತ್ಕಾರದ ವಸೂಲಿಯಾಗಿರದೆ ಮನಃಪೂರ್ವಕವಾಗಿ ಕೊಟ್ಟಿರುವ ಸಹಾಯ ಧನವಾಗಿರುವುದು.