2 Corinthians 9:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿಯೊಬ್ಬ ವ್ಯಕ್ತಿಯು ತನ್ನು ಹೃದಯದಲ್ಲಿ ಎಷ್ಟನ್ನು ನಿರ್ಧರಿಸಿಕೊಂಡಿದ್ದಾನೊ ಅಷ್ಟನ್ನೇ ಕೊಡಬೇಕು. ಯಾವನೂ ದುಃಖದಿಂದ ಕೊಡಬಾರದು. ಅಲ್ಲದೆ ಯಾವನೂ ಒತ್ತಾಯದ ದೆಸೆಯಿಂದ ಕೊಡಬಾರದು. ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.
Kannada BSI Bible 2016
ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಬ್ಬನು ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನ ಮೇಲೆ ದೇವರಿಗೆ ಪ್ರೀತಿಯುಂಟು.
Kannada Bible (KNCL) BSI 2016
ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿರ್ಧರಿಸಿದ್ದನ್ನು ಕೊಡಲಿ. ಮನಸ್ಸಿಲ್ಲದ ಮನಸ್ಸಿನಿಂದಾಗಲಿ ಅಥವಾ ಬಲವಂತದಿಂದಾಗಲಿ ಕೊಡಬಾರದು. ಏಕೆಂದರೆ ಸಂತೋಷದಿಂದ ಕೊಡುವವನನ್ನು ದೇವರು ಪ್ರೀತಿಸುತ್ತಾರೆ.