2 John 1:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮಗೆ ಹೇಳಬೇಕಾದುದು ಬಹಳಷ್ಟಿದೆ. ಆದರೆ ನಾನು ಕಾಗದವನ್ನೂ ಇಂಕನ್ನೂ ಬಳಸಲಿಚ್ಛಿಸುವುದಿಲ್ಲ. ಅದರ ಬದಲು, ನಾನೇ ನಿಮ್ಮ ಬಳಿಗೆ ಬರಬೇಕೆಂದಿದ್ದೇನೆ. ಆಗ ನಾವು ಒಟ್ಟಾಗಿ ಮಾತನಾಡಬಹುದು. ಇದು ನಮಗೆ ಬಹಳ ಸಂತಸವನ್ನು ಉಂಟುಮಾಡುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ, ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವುದಕ್ಕೆ ನನಗೆ ಇಷ್ಟವಿಲ್ಲ. ಆದರೆ, ನಾನು ನಿಮ್ಮ ಬಳಿಗೆ ಬಂದು, ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. ಆಗ, ನಿಮ್ಮ ಸಂತೋಷವು ಪರಿಪೂರ್ಣವಾಗುವುದು.
Kannada BSI Bible 2016
ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ; ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದು.ಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ. ಆಮೆನ್.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ಬರೆಯುವದಕ್ಕೆ ನನಗೆ ಅನೇಕ ಸಂಗತಿಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವದಕ್ಕೆ ನನಗೆ ಮನಸ್ಸಿಲ್ಲ. ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತಾಡುವೆನೆಂದು ನಿರೀಕ್ಷಿಸುತ್ತೇನೆ.
Kannada Bible (KNCL) BSI 2016
ನಾನು ನಿಮಗೆ ತಿಳಿಸಬೇಕಾದ ವಿಷಯಗಳು ಬಹಳಷ್ಟಿವೆ. ಆದರೆ ಅವುಗಳನ್ನು ಕಾಗದಪತ್ರಗಳ ಮೂಲಕ ತಿಳಿಸಲು ನನಗೆ ಇಷ್ಟವಿಲ್ಲ. ನಾನೇ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ಮಾತನಾಡುವ ನಿರೀಕ್ಷೆ ಇದೆ. ಹೀಗೆ ಮುಖಾಮುಖಿಯಾಗಿ ಮಾತನಾಡುವುದರಿಂದ ಪೂರ್ಣಸಂತೋಷವೂ ಆಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವುದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. ಆಗ ನಮ್ಮ ಸಂತೋಷವು ಪರಿಪೂರ್ಣವಾಗುವುದು.