2 John 1:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಮಕ್ಕಳಲ್ಲಿ ಕೆಲವರ ಬಗ್ಗೆ ನಾನು ಕೇಳಿದಾಗ ತುಂಬಾ ಸಂತೋಷವಾಯಿತು. ತಂದೆಯಾದ ದೇವರು ನಮಗೆ ಆಜ್ಞಾಪಿಸಿದ ಸತ್ಯಮಾರ್ಗವನ್ನು ಅವರು ಅನುಸರಿಸುತ್ತಿರುವುದರಿಂದ ನನಗೆ ಸಂತೋಷವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ, ನಿಮ್ಮ ಮಕ್ಕಳಲ್ಲಿ ಕೆಲವರು, ಸತ್ಯವಂತರಾಗಿ ನಡೆಯುವುದನ್ನು ಕಂಡು ನಾನು ಬಹಳ ಸಂತೋಷಪಟ್ಟೆನು.
Kannada BSI Bible 2016
ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಮಗುಂಟಾದ ಆಜ್ಞಾನುಸಾರ ಸತ್ಯವಂತರಾಗಿ ನಡೆಯುವದನ್ನು ಕಂಡು ಬಹಳ ಸಂತೋಷವುಳ್ಳವನಾದೆನು.
Kannada Bible (KNCL) BSI 2016
ನಿನ್ನ ಮಕ್ಕಳಲ್ಲಿ ಕೆಲವರು ಪಿತನು ವಿಧಿಸಿದಂತೆ ಸತ್ಯಸಂಧರಾಗಿ ನಡೆಯುವುದನ್ನು ಕಂಡು ನನಗಾದ ಆನಂದ ಅಷ್ಟಿಷ್ಟಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವುದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.