2 John 1:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಿಯ ಅಮ್ಮನವರೇ, ಈಗ ನಾನು ನಿಮ್ಮನ್ನು ಕೇಳಿಕೊಳ್ಳುವುದೇನೆಂದರೆ, ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದು ಹೊಸ ಆಜ್ಞೆಯಾಗಿರದೆ ಮೊದಲಿನಿಂದಲೂ ಇದ್ದ ಆಜ್ಞೆಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿಮಗೆ ಬರೆಯದೆ, ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿಮಗೆ ಬರೆಯುವವನಾಗಿ; ನಾವು ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರೋಣ ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ.
Kannada BSI Bible 2016
ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆ ಯನ್ನು ನಿನಗೆ ಬರೆಯುವವನಾಗಿ--ನಾವು ಒಬ್ಬರ ನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿಮಗೆ ಬರೆಯದೆ ಮೊದಲಿನಿಂದಲೂ ನಮಗೆ ಬಂದ ಆಜ್ಞೆಯನ್ನು ಬರೆಯುವವನಾಗಿ - ನಾವು ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರೋಣ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.
Kannada Bible (KNCL) BSI 2016
ಶ್ರೀಮಾತೆಯೇ, ನಾನು ಮಾಡುವ ಬಿನ್ನಹವಿದು: ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದು ಮೊತ್ತಮೊದಲಿನಿಂದಲೂ ನಮಗೆ ಕೊಡಲಾದ ಆಜ್ಞೆಯೇ ಹೊರತು ಹೊಸದೇನೂ ಅಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿನಗೆ ಬರೆಯುವವನಾಗಿ ನಾವು ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.