2 John 1:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ಲೋಕದಲ್ಲಿ ಅನೇಕ ಸುಳ್ಳುಬೋಧಕರಿದ್ದಾರೆ. ಯೇಸು ಕ್ರಿಸ್ತನು ಈ ಲೋಕಕ್ಕೆ ಮನುಷ್ಯನಾಗಿ ಬಂದನೆಂಬುದನ್ನು ಈ ಸುಳ್ಳುಬೋಧಕರು ಒಪ್ಪಿಕೊಳ್ಳುವುದಿಲ್ಲ. ಈ ಸತ್ಯವನ್ನು ಒಪ್ಪಿಕೊಳ್ಳದವನು ಸುಳ್ಳುಬೋಧಕನಾಗಿದ್ದಾನೆ ಮತ್ತು ಯೇಸು ಕ್ರಿಸ್ತನ ವೈರಿಯಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.
Kannada BSI Bible 2016
ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯನಾಗಿ ಬಂದಿರುವ ಯೇಸು ಕ್ರಿಸ್ತನನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಯೇಸುವನ್ನು ಒಪ್ಪದವನು ಮೋಸಗಾರನೂ ಕ್ರಿಸ್ತವಿರೋಧಿಯೂ ಆಗಿದ್ದಾನೆ.
Kannada Bible (KNCL) BSI 2016
ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನರಮಾಂಸದಲ್ಲಿ ಬಂದಿರುವ ಕ್ರಿಸ್ತ ಯೇಸುವನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವರೇ ಮೋಸಗಾರರೂ ಕ್ರಿಸ್ತವಿರೋಧಿಗಳೂ ಆಗಿದ್ದಾರೆ.