2 Kings 1:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲೀಯನು ಸೇನಾಧಿಪತಿಗೆ ಮತ್ತು ಅವನ ಐವತ್ತು ಮಂದಿ ಜನರಿಗೆ, “ನಾನು ದೇವಮನುಷ್ಯನಾಗಿದ್ದರೆ ಪರಲೋಕದಿಂದ ಬೆಂಕಿಯು ಕೆಳಗಿಳಿದು ಬಂದು ನಿನ್ನನ್ನೂ ನಿನ್ನ ಐವತ್ತು ಜನರನ್ನೂ ನಾಶಗೊಳಿಸಲಿ!” ಎಂದು ಹೇಳಿದನು. ಆಗ ಪರಲೋಕದಿಂದ ದೇವರ ಬೆಂಕಿಯು ಇಳಿದು ಬಂದು ಸೇನಾಧಿಪತಿಯನ್ನೂ ಅವನ ಐವತ್ತು ಜನರನ್ನೂ ನಾಶಗೊಳಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಎಲೀಯನು, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ, ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.
Kannada BSI Bible 2016
ಎಲೀಯನು ಅವರಿಗೆ ಪ್ರತ್ಯುತ್ತರವಾಗಿನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶ ದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಎಲೀಯನು ಅವನಿಗೆ - ನಾನು ದೇವರ ಮನುಷ್ಯನಾಗಿರುವದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ ಎಂದನು. ಕೂಡಲೆ ದೇವರು ಆಕಾಶದಿಂದ ಕಳುಹಿಸಿದ ಬೆಂಕಿಯು ಬಂದು ಅವನನ್ನೂ ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಸುಟ್ಟುಬಿಟ್ಟಿತು.
Kannada Bible (KNCL) BSI 2016
ಅದಕ್ಕೆ ಎಲೀಯನು, “ನಾನು ದೈವಪುರುಷ ಹೌದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ,” ಎಂದನು. ಕೂಡಲೆ ದೇವರು ಆಕಾಶದಿಂದ ಕಳುಹಿಸಿದ ಬೆಂಕಿ ಬಂದು ಅವನನ್ನೂ ಅವನ ಐವತ್ತುಮಂದಿ ಸಿಪಾಯಿಗಳನ್ನೂ ಸುಟ್ಟುಬಿಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲೀಯನು ಅವರಿಗೆ ಉತ್ತರವಾಗಿ, “ನಾನು ದೇವರ ಮನುಷ್ಯನಾಗಿದ್ದರೆ, ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ,” ಎಂದನು. ಆಗ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.