2 Kings 1:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪರಲೋಕದಿಂದ ಕೆಳಗಿಳಿದು ಬಂದ ಬೆಂಕಿಯು ಮೊದಲ ಇಬ್ಬರು ಸೇನಾಧಿಪತಿಗಳನ್ನೂ ಅವರ ಐವತ್ತು ಜನರನ್ನೂ ನಾಶಗೊಳಿಸಿತು. ಆದರೆ ಈಗ ನಮ್ಮ ಮೇಲೆ ಕನಿಕರ ತೋರಿ ಜೀವಿಸಲು ಅವಕಾಶ ಮಾಡಿಕೊಡು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕಾಶದಿಂದ ಬೆಂಕಿಬಿದ್ದು ಮೊದಲು ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ, ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ, ನನ್ನ ಪ್ರಾಣವಾದರೂ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ” ಎಂದು ಬೇಡಿಕೊಂಡನು.
Kannada BSI Bible 2016
ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ ಅವರ ಐವತ್ತು ಮಂದಿಯನ್ನೂ ದಹಿ ಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ ಎಂದು ಹೇಳಿ ಅವ ನನ್ನು ಬೇಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕಾಶದಿಂದ ಬೆಂಕಿಬಿದ್ದು ಮುಂಚೆ ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ; ನನ್ನ ಪ್ರಾಣವಾದರೋ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ ಎಂದು ಬೇಡಿಕೊಂಡನು.
Kannada Bible (KNCL) BSI 2016
ಆಕಾಶದಿಂದ ಬೆಂಕಿಬಿದ್ದು ನನಗೆ ಮುಂದೆ ಬಂದ ಆ ಇಬ್ಬರು ಪಂಚಾಶದಧಿಪತಿಗಳನ್ನೂ ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲವೆ? ನನ್ನ ಪ್ರಾಣವಾದರೂ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದೆಂದು ಮಾನ್ಯವಾಗಲಿ,” ಎಂದು ಬೇಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ, ಅವರ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಮೌಲ್ಯವುಳ್ಳದ್ದಾಗಿರಲಿ,” ಎಂದು ಹೇಳಿ ಅವನನ್ನು ಬೇಡಿಕೊಂಡನು.