2 Kings 1:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ದೂತನು ಎಲೀಯನಿಗೆ, “ಸೇನಾಧಿಪತಿಯೊಡನೆ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದನು. ಎಲೀಯನು ರಾಜನಾದ ಅಹಜ್ಯನನ್ನು ನೋಡಲು ಆ ಸೇನಾಧಿಪತಿಯೊಡನೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದ್ದರಿಂದ ಅವನು ಎದ್ದು, ಇವನ ಜೊತೆಯಲ್ಲಿ ಅರಸನ ಬಳಿಗೆ ಹೋದನು.
Kannada BSI Bible 2016
ಆಗ ಕರ್ತನ ದೂತನು ಎಲೀಯನಿಗೆ--ಅವನ ಸಂಗಡ ಇಳಿದು ಹೋಗು; ಅವನಿಗೆ ಭಯಪಡಬೇಡ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನ ದೂತನು ಎಲೀಯನಿಗೆ - ನೀನು ಇವನ ಸಂಗಡ ಹೋಗು; ಇವನಿಗೆ ಹೆದರಬೇಡ ಎಂದು ಹೇಳಿದ್ದರಿಂದ ಅವನು ಎದ್ದು ಇವನ ಜೊತೆಯಲ್ಲಿ ಅರಸನ ಬಳಿಗೆ ಹೋಗಿ ಅವನಿಗೆ -
Kannada Bible (KNCL) BSI 2016
ಆಗ ಸರ್ವೇಶ್ವರನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು; ಹೆದರಬೇಡ,” ಎಂದು ಹೇಳಿದನು. ಆದ್ದರಿಂದ ಎಲೀಯನು ಎದ್ದು ಇವನ ಜೊತೆಯಲ್ಲೇ ಅರಸನ ಬಳಿಗೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರ ದೂತನು ಎಲೀಯನಿಗೆ, “ಅವನ ಸಂಗಡ ಇಳಿದು ಹೋಗು, ಅವನಿಗೆ ಭಯಪಡಬೇಡ,” ಎಂದನು. ಆದ್ದರಿಂದ ಎಲೀಯನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋದನು.