2 Kings 1:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲೀಯನು ಅಹಜ್ಯನಿಗೆ, “ಇಸ್ರೇಲಿನಲ್ಲಿ ದೇವರಿದ್ದಾನೆ. ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ಪ್ರಶ್ನೆಗಳನ್ನು ಕೇಳಲು ಸಂದೇಶಕರನ್ನು ಏಕೆ ಕಳುಹಿಸಿದೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ನೀನು ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ! ಎಂಬುದಾಗಿ ಯೆಹೋವನು ಅನ್ನುತ್ತಾನೆ.” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂತರ ಎಲೀಯನು ಅರಸನಿಗೆ, “ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರ ಮಾಡುವುದಕ್ಕೆ ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇಬೇಕು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.
Kannada BSI Bible 2016
ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರಮಾಡುವದಕ್ಕೆ ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದಿಳಿಯದೆ ಸಾಯಲೇಬೇಕು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.
Kannada Bible (KNCL) BSI 2016
ಅರಸನಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇಕೆ? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಿಗೆ, “ಯೆಹೋವ ದೇವರ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರಿಲ್ಲವೆಂಬ ಹಾಗೆ ನೀನು ಎಕ್ರೋನಿನ ದೇವರಾದ ಬಾಳ್ ಜೆಬೂಬನ್ನು ವಿಚಾರಿಸಲು ದೂತರನ್ನು ಕಳುಹಿಸಿದ ಕಾರಣ, ‘ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.