2 Kings 1:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲೀಯನ ಮೂಲಕ ಯೆಹೋವನು ಹೇಳಿದಂತೆಯೇ ಅಹಜ್ಯನು ಸತ್ತುಹೋದನು. ಅಹಜ್ಯನಿಗೆ ಮಕ್ಕಳಿರಲಿಲ್ಲ. ಆದ್ದರಿಂದ ಅಹಜ್ಯನ ನಂತರ ಯೆಹೋರಾಮನು ಹೊಸ ರಾಜನಾದನು. ಯೆಹೋಷಾಫಾಟನ ಮಗನಾದ ಯೆಹೋರಾಮನು ಯೆಹೂದದ ರಾಜನಾಗಿದ್ದ ಎರಡನೆಯ ವರ್ಷದಲ್ಲಿ ಯೊಹೋರಾವುನು ಆಳುವುದಕ್ಕೆ ಆರಂಭಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಳಿಸಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದೆ ಇದ್ದುದರಿಂದ ಅವನಿಗೆ ಬದಲಾಗಿ ಅವನ ತಮ್ಮನಾದ ಯೋರಾಮನೆಂಬವನು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದನು
Kannada BSI Bible 2016
ಹಾಗೆಯೇ ಎಲೀ ಯನು ಹೇಳಿದ ಕರ್ತನ ವಾಕ್ಯದ ಪ್ರಕಾರವೇ ಅವನು ಸತ್ತು ಹೋದನು; ಅವನಿಗೆ ಮಗನು ಇಲ್ಲದ್ದರಿಂದ ಯೆಹೂದದ ಅರಸನಾದ ಯೆಹೋಷಾಫಾಟನ ಮಗ ನಾಗಿರುವ ಯೋರಾಮನ ಆಳ್ವಿಕೆಯ ಎರಡನೇ ವರುಷ ದಲ್ಲಿ ಯೋರಾಮನು ಅವನಿಗೆ ಬದಲಾಗಿ ಅರಸ ನಾದನು.ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಳಿಸಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದ್ದರಿಂದ ಅವನಿಗೆ ಬದಲಾಗಿ [ಅವನ ತಮ್ಮನಾದ] ಯೋರಾಮನೆಂಬವನು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಆಳಿಕೆಯ ಎರಡನೆಯ ವರುಷದಲ್ಲಿ ಅರಸನಾದನು.
Kannada Bible (KNCL) BSI 2016
ಸರ್ವೇಶ್ವರ ಎಲೀಯನ ಮುಖಾಂತರ ಮುಂತಿಳಿಸಿದಂತೆಯೇ ಅರಸನು ಸತ್ತುಹೋದನು. ಅವನಿಗೆ ಮಕ್ಕಳಿರಲಿಲ್ಲ. ಅವನ ಸ್ಥಾನದಲ್ಲಿ ಅವನ ತಮ್ಮ ಯೋರಾಮನು, ಯೆಹೂದ್ಯರ ಅರಸ ಯೆಹೋಷಾಫಾಟನ ಮಗ ಯೆಹೋರಾಮನ ಅಳ್ವಿಕೆಯ ಎರಡನೆಯ ವರ್ಷದಲ್ಲಿ, ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಅವನು ಎಲೀಯನು ಹೇಳಿದ ಯೆಹೋವ ದೇವರ ವಾಕ್ಯದ ಪ್ರಕಾರವೇ ಸತ್ತುಹೋದನು. ಅಹಜ್ಯನಿಗೆ ಮಗನಿಲ್ಲದ್ದರಿಂದ ಯೆಹೂದದ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಎರಡನೆಯ ವರ್ಷದಲ್ಲಿ ಯೋರಾಮನು ಅವನಿಗೆ ಬದಲಾಗಿ ಅರಸನಾದನು.