2 Kings 1:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದು ದಿನ, ಅಹಜ್ಯನು ಸಮಾರ್ಯದ ತನ್ನ ಮನೆಯ ಮಾಳಿಗೆಯ ಮೇಲಿದ್ದನು. ಅಹಜ್ಯನು ಮನೆಯ ಮೇಲಿನ ಮರದ ಕಂಬಗಳ ಮೂಲಕ ಕೆಳಕ್ಕೆ ಬಿದ್ದನು. ಅವನಿಗೆ ಬಹಳ ಗಾಯಗಳಾದವು. ಅಹಜ್ಯನು ಸಂದೇಶಕರನ್ನು ಕರೆದು ಅವರಿಗೆ, “ಎಕ್ರೋನಿನ ದೇವರಾದ ಬಾಳ್ಜೆಬೂಬನ ಅರ್ಚಕರ ಬಳಿಗೆ ಹೋಗಿ, ನನ್ನ ಗಾಯಗಳು ಗುಣವಾಗುತ್ತವೆಯೇ ಎಂಬುದನ್ನು ಅವರಿಂದ ತಿಳಿದುಕೊಳ್ಳಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು.
Kannada BSI Bible 2016
ಇದಲ್ಲದೆ ಅಹಜ್ಯನು ಸಮಾರ್ಯ ದಲ್ಲಿರುವ ತನ್ನ ಮೇಲು ಮಾಳಿಗೆಯ ಜಾಲರು ಕಿಟಿಕಿ ಯಿಂದ ಬಿದ್ದು ರೋಗಿಷ್ಟನಾದದರಿಂದ ಸೇವಕರನ್ನು ಕರೆದು--ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ--ನಾನು ಈ ರೋಗದಿಂದ ವಾಸಿಯಾ ಗುವೇನೋ ಇಲ್ಲವೋ ಎಂದು ವಿಚಾರಿಸಲು ಅವರನ್ನು ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಜಾಳಾಂಧರ ಕಿಟಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ - ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬದನ್ನು ವಿಚಾರಿಸಿರಿ ಎಂದು ಹೇಳಿಕಳುಹಿಸಿದನು.
Kannada Bible (KNCL) BSI 2016
ಅಹಜ್ಯನು ಸಮಾರಿಯದಲ್ಲಿದ್ದ ತನ್ನ ಮೇಲುಪ್ಪರಿಗೆಯ ಕಿಟಕಿಯೊಂದರಿಂದ ಬಿದ್ದು ಅಸ್ವಸ್ಥನಾಗಿದ್ದನು. ಅವನು ತನ್ನ ಸೇವಕರನ್ನು ಕರೆದು, “ನೀವು ಎಕ್ರೋನಿನ ದೇವರಾದ ‘ಬಾಳ್ಜೆಬೂಬ’ನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ಗುಣವಾಗುವೆನೋ ಇಲ್ಲವೋ, ಎಂದು ವಿಚಾರಿಸಿ ಬನ್ನಿ,” ಎಂದು ಹೇಳಿ ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಹಜ್ಯನು ಸಮಾರ್ಯದಲ್ಲಿದ್ದ ತನ್ನ ಮೇಲುಪ್ಪರಿಗೆಯ ಕಿಟಕಿಯೊಂದರಿಂದ ಬಿದ್ದು ಅಸ್ವಸ್ಥನಾಗಿದ್ದನು. ಅವನು ತನ್ನ ಸೇವಕರನ್ನು ಕರೆದು, “ಎಕ್ರೋನಿನ ದೇವರಾದ ‘ಬಾಳ್ ಜೆಬೂಬನ’ ಸನ್ನಿಧಿಗೆ ಹೋಗಿ, ನಾನು ಈ ಅಸ್ವಸ್ಥತೆಯಿಂದ ಗುಣವಾಗುವೆನೋ ಇಲ್ಲವೋ? ಎಂದು ವಿಚಾರಿಸಿ ಬನ್ನಿ,” ಎಂದು ಹೇಳಿ ಕಳುಹಿಸಿದನು.