2 Kings 1:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೆಹೋವನ ದೂತನೊಬ್ಬನು ತಿಷ್ಬೀಯನಾದ ಎಲೀಯನಿಗೆ, “ರಾಜನಾದ ಅಹಜ್ಯನು ಸಮಾರ್ಯದಿಂದ ಕೆಲವು ಸಂದೇಶಕರನ್ನು ಕಳುಹಿಸಿದ್ದಾನೆ. ನೀನು ಹೋಗಿ ಅವರನ್ನು ಭೇಟಿಯಾಗಿ ಅವರಿಗೆ, ‘ಇಸ್ರೇಲಿನಲ್ಲಿಯೂ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಬಳಿಗೆ ಹೋಗಿ ಪ್ರಶ್ನೆಗಳನ್ನು ಕೇಳುವುದೇಕೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ?
Kannada BSI Bible 2016
ಆದರೆ ಕರ್ತನ ದೂತನು ತಿಷ್ಬೀಯ ನಾದ ಎಲೀಯನಿಗೆ--ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ ಹೇಳಬೇಕಾ ದದ್ದೇನಂದರೆ--ಇಸ್ರಾಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀವು ಎಕ್ರೋನಿನ ದೇವ ರಾದ ಬಾಳ್ಜೆಬೂಬನನ್ನು ವಿಚಾರಿಸಲು ಹೋಗುತ್ತೀರಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ - ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ - ನೀವು ಎಕ್ರೋನಿನ ದೇವರಾದ ಬಾಳ್ವೆಬೂಬನನ್ನು ವಿಚಾರಿಸುವದಕ್ಕೆ ಹೋಗುವದೇನು? ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ?
Kannada Bible (KNCL) BSI 2016
ಆದರೆ ಸರ್ವೇಶ್ವರ ಸ್ವಾಮಿಯ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರಿಯದ ಅರಸನ ಆ ಸೇವಕರನ್ನು ಭೇಟಿಯಾಗು. ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋವ ದೇವರ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ, ‘ಇಸ್ರಾಯೇಲಿನಲ್ಲಿ ದೇವರು ಇಲ್ಲವೆ? ನೀವು ಎಕ್ರೋನಿನ ದೇವರಾದ ಬಾಳ್ ಜೆಬೂಬನನ್ನು ವಿಚಾರಿಸಲು ಹೋಗುತ್ತಿರುವುದೇಕೆ?