2 Kings 1:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ಅಹಜ್ಯನಿಗೆ ಈ ಸಂಗತಿಗಳನ್ನು ತಿಳಿಸಿ: ಬಾಳ್ಜೆಬೂಬನಿಂದ ಪ್ರಶ್ನೆಗಳನ್ನು ಕೇಳುವುದಕ್ಕೆ ನೀನು ಸಂದೇಶಕರನ್ನು ಕಳುಹಿಸಿದೆ. ನೀನು ಈ ಕಾರ್ಯವನ್ನು ಮಾಡಿದುದರಿಂದ, ಯೆಹೋವನು ಹೀಗೆನ್ನುವನು: ‘ನೀನು ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ’ ಎಂದು ತಿಳಿಸು” ಎಂಬುದಾಗಿ ಹೇಳಿದನು. ಎಲೀಯನು ಅಹಜ್ಯನ ಸೇವಕರಿಗೆ ಈ ಮಾತುಗಳನ್ನು ಹೇಳಿ ಅಲ್ಲಿಂದ ಹೊರಟುಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹಜ್ಯನು ತಾನು ಹತ್ತಿ ಮಲಗಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು.
Kannada BSI Bible 2016
ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು. ಆಗ ಎಲೀಯನು ಹೊರಟುಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಜ್ಯನು ತಾನು ಹತ್ತಿದ ಮಂಚದಿಂದಿಳಿಯದೆ ಸಾಯಲೇಬೇಕು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು.
Kannada Bible (KNCL) BSI 2016
ಈ ಕಾರಣ ಅಹಜ್ಯನು ತಾನು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು,” ಎಂದು ಆಜ್ಞಾಪಿಸಿದರು. ಎಲೀಯನು ಹಾಗೆಯೇ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ, ನಿಶ್ಚಯವಾಗಿ ಸಾಯುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ ಎಂದು ಹೇಳು,” ಎಂದರು. ಆಗ ಎಲೀಯನು ಹೊರಟುಹೋಗಿ ಅದರಂತೆ ಹೇಳಿದನು.