2 Kings 1:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಂದೇಶಕರು ಅಹಜ್ಯನಿಗೆ, “ಒಬ್ಬನು ನಮ್ಮನ್ನು ಭೇಟಿಯಾಗಿ” ನಿಮ್ಮನ್ನು ಕಳುಹಿಸಿದ ರಾಜನ ಬಳಿಗೆ ಹಿಂದಿರುಗಿ ಹೋಗಿ ಯೆಹೋವನು ಹೇಳುವುದನ್ನು ಅವನಿಗೆ ತಿಳಿಸಿ. ಯೆಹೋವನು ಹೇಳುವುದೇನೆಂದರೆ: ‘ಇಸ್ರೇಲಿನಲ್ಲಿ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಸಂದೇಶಕರನ್ನು ಕಳುಹಿಸಿದುದೇಕೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ!”‘ ಎಂಬುದಾಗಿ ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವರು, “ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ, ‘ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ’ ಯೆಹೋವನ ಹೆಸರಿನಲ್ಲಿ ಅವನಿಗೆ, ‘ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಕಳುಹಿಸುವುದೇನು? ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಹೇಳಿರಿ ಎಂದು ಆಜ್ಞಾಪಿಸಿದನು” ಎಂದು ಉತ್ತರ ಕೊಟ್ಟರು.
Kannada BSI Bible 2016
ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಅವರು - ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ - ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ ಯೆಹೋವನ ಹೆಸರಿನಲ್ಲಿ ಅವನಿಗೆ - ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಿಸುವದಕ್ಕೆ ಕಳುಹಿಸುವದೇನು? ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದಿಳಿಯದೆ ಸಾಯಲೇಬೇಕು ಎಂಬದಾಗಿ ಹೇಳಿರಿ ಎಂದು ಆಜ್ಞಾಪಿಸಿದನು ಎಂದು ಉತ್ತರಕೊಟ್ಟರು.
Kannada Bible (KNCL) BSI 2016
ಅದಕ್ಕೆ ಅವರು, “ಒಬ್ಬ ವ್ಯಕ್ತಿ ನಮ್ಮನ್ನು ಎದುರುಗೊಂಡು, “ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿರಿ. ಸರ್ವೇಶ್ವರನ ಹೆಸರಿನಲ್ಲಿ ಅವನಿಗೆ ಹೀಗೆಂದು ಹೇಳಿರಿ: ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಹೇಳಿರಿ’ ಎಂದು ಆಜ್ಞಾಪಿಸಿದನು,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅರಸನಿಗೆ, “ಒಬ್ಬ ಮನುಷ್ಯನು ನಮಗೆ ಎದುರಾಗಿ ಬಂದು, ‘ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿ ಹೋಗಿ, ಯೆಹೋವ ದೇವರು ಹೇಳುವುದು ಏನೆಂದರೆ: ಇಸ್ರಾಯೇಲಿನಲ್ಲಿ ದೇವರು ಇಲ್ಲವೆ? ನೀನು ಎಕ್ರೋನಿನ ದೇವರಾದ ಬಾಳ್ ಜೆಬೂಬನನ್ನು ವಿಚಾರಿಸಲು ಜನರನ್ನು ಕಳುಹಿಸಿರುತ್ತೀ? ಇದರ ನಿಮಿತ್ತ, ನೀನು ಏರಿದ ಮಂಚದಿಂದ ಇಳಿಯದೆ, ನಿಶ್ಚಯವಾಗಿ ಸಾಯುವೆ,’ ಎಂಬುದಾಗಿ ಅವನಿಗೆ ಹೇಳಿರಿ, ಎಂದು ತಿಳಿಸಿದನು,” ಎಂದರು.