2 Kings 1:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಹಜ್ಯನು ಸಂದೇಶಕರನ್ನು, “ನಿಮ್ಮನ್ನು ಭೇಟಿಮಾಡಿ ಈ ಮಾತುಗಳನ್ನು ತಿಳಿಸಿದ ಮನುಷ್ಯನು ಹೇಗಿದ್ದನು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ತಿರುಗಿ ಅವರನ್ನು, “ನಿಮಗೆ ಎದುರಾಗಿ ಹೀಗೆ ಹೇಳಿದ ಮನುಷ್ಯನು ಹೇಗಿದ್ದನು?” ಎಂದು ಕೇಳಲು,
Kannada BSI Bible 2016
ಅವನು ಅವರಿಗೆನಿಮಗೆದುರಾಗಿ ಬಂದು ಈ ಮಾತುಗಳನ್ನು ನಿಮಗೆ ಹೇಳಿದ ಮನುಷ್ಯನು ಯಾವ ತರದವನಾಗಿದ್ದಾನೆಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ತಿರಿಗಿ ಅವರನ್ನು - ನಿಮಗೆ ಎದುರಾಗಿ ಹೀಗೆ ಹೇಳಿದ ಮನುಷ್ಯನು ಹೇಗಿದ್ದನು ಎಂದು ಕೇಳಲು ಅವರು -
Kannada Bible (KNCL) BSI 2016
ಅದಕ್ಕೆ ಅರಸನು, “ನಿಮ್ಮನ್ನು ಭೇಟಿಯಾಗಿ ಹೀಗೆಂದು ನುಡಿದ ಆ ವ್ಯಕ್ತಿ ಹೇಗಿದ್ದನು?” ಎಂದು ವಿಚಾರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ಅವರಿಗೆ, “ನಿಮಗೆದುರಾಗಿ ಬಂದು ಈ ಮಾತುಗಳನ್ನು ನಿಮಗೆ ಹೇಳಿದ ಆ ಮನುಷ್ಯನು ಹೇಗಿದ್ದನು?” ಎಂದು ಕೇಳಿದನು.