2 Kings 1:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಂದೇಶಕರು ಅಹಜ್ಯನಿಗೆ, “ಅವನು ಉಣ್ಣೆಯ ಮೇಲಂಗಿಯನ್ನು ಧರಿಸಿದ್ದನು ಮತ್ತು ಸೊಂಟಕ್ಕೆ ಚರ್ಮದ ಪಟ್ಟಿಯನ್ನು ಕಟ್ಟಿಕೊಂಡಿದ್ದನು” ಎಂದರು. ಆಗ ಅಹಜ್ಯನು, “ಅವನು ತಿಷ್ಬೀಯನಾದ ಎಲೀಯನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು, “ಅವನು ಕಂಬಳಿ ಹೊದ್ದುಕೊಂಡಿದ್ದನು. ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು” ಎಂದು ಉತ್ತರ ಕೊಟ್ಟರು. ಅದಕ್ಕೆ ಅರಸನು, “ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು” ಎಂದನು.
Kannada BSI Bible 2016
ಅದಕ್ಕವರು--ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು--ತಿಷ್ಬೀಯನಾದ ಎಲೀಯನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಕಂಬಳಿಯನ್ನು ಹೊದ್ದುಕೊಂಡಿದ್ದನು; ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು ಎಂದು ಉತ್ತರಕೊಟ್ಟರು. ಅದಕ್ಕೆ ಅರಸನು - ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು ಅಂದನು.
Kannada Bible (KNCL) BSI 2016
ಅವರು, “ಅವನು ಕಂಬಳಿಯನ್ನು ಹೊದ್ದುಕೊಂಡಿದ್ದ; ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು,” ಎಂದರು. ಆಗ ಅರಸನು, “ಆ ವ್ಯಕ್ತಿ ತಿಷ್ಬೀಯನಾದ ಎಲೀಯನೇ ಆಗಿರಬೇಕು,” ಎಂದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವರು, “ಅವನು ಕಂಬಳಿಯನ್ನು ಹೊದ್ದುಕೊಂಡಿದ್ದನು; ಅವನ ಸೊಂಟಕ್ಕೆ ಸುತ್ತಲೂ ತೊಗಲಿನ ನಡುಕಟ್ಟು ಇತ್ತು,” ಎಂದರು. ಆಗ ಅರಸನು, “ಅವನು ತಿಷ್ಬೀಯನಾದ ಎಲೀಯನೇ ಆಗಿರಬೇಕು,” ಎಂದು ಹೇಳಿದನು.