2 Kings 1:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಹಜ್ಯನು ಎಲೀಯನ ಬಳಿಗೆ ಒಬ್ಬ ಸೇನಾಧಿಪತಿಯನ್ನು ಮತ್ತು ಐವತ್ತು ಮಂದಿ ಜನರನ್ನು ಕಳುಹಿಸಿದನು. ಸೇನಾಧಿಪತಿಯು ಎಲೀಯನ ಬಳಿಗೆ ಹೋದನು. ಆ ಸಮಯದಲ್ಲಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿದ್ದನು. ಆ ಸೇನಾಧಿಪತಿಯು ಎಲೀಯನಿಗೆ, “ದೇವಮನುಷ್ಯನೇ, ರಾಜನು ಹೇಳುತ್ತಾನೆ, ‘ಕೆಳಗಿಳಿದು ಬಾ’“ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನು ಎಲೀಯನನ್ನು ಕರೆತರುವುದಕ್ಕಾಗಿ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡು ಅವನಿಗೆ, “ದೇವರ ಮನುಷ್ಯನೇ ಇಳಿದು ಬಾ ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.
Kannada BSI Bible 2016
ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರಸನು ಎಲೀಯನನ್ನು ಕರತರುವದಕ್ಕಾಗಿ ಪಂಚದಶಾಧಿಪತಿಯನ್ನು ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕೂತಿರುವದನ್ನು ಕಂಡು ಅವನಿಗೆ - ದೇವರ ಮನುಷ್ಯನೇ ಇಳಿದು ಬಾ; ಅರಸನು ನಿನ್ನನ್ನು ಕರೆಯುತ್ತಾನೆ ಎಂದು ಹೇಳಿದನು.
Kannada Bible (KNCL) BSI 2016
ಬಳಿಕ ಅರಸನು ಎಲೀಯನನ್ನು ಕರೆದುತರುವುದಕ್ಕಾಗಿ ಒಬ್ಬ ಪಂಚಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡನು. “ದೈವಪುರುಷರೇ, ಇಳಿದು ಬನ್ನಿ, ಅರಸರು ತಮ್ಮನ್ನು ಕರೆಯುತ್ತಿದ್ದಾರೆ,” ಎಂದು ಆಮಂತ್ರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ಒಬ್ಬ ಪ್ರಧಾನನನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಎಲೀಯನ ಬಳಿಗೆ ಕಳುಹಿಸಿದನು. ಪ್ರಧಾನನು ಅವನ ಬಳಿಗೆ ಹೋದಾಗ, ಇಗೋ, ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿದ್ದನು. ಆಗ ಅವನು ಎಲೀಯನಿಗೆ, “ದೇವರ ಮನುಷ್ಯನೇ, ‘ಇಳಿದು ಬಾ,’ ಎಂದು ಅರಸನು ಹೇಳುತ್ತಾನೆ,” ಎಂದನು.