2 Kings 10:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಜ್ರೇಲಿನಲ್ಲಿ ವಾಸಿಸುತ್ತಿದ್ದ ಅಹಾಬನ ಕುಟುಂಬದ ಉಳಿದವರನ್ನೆಲ್ಲ ಯೇಹು ಕೊಂದುಹಾಕಿದನು. ಅಹಾಬನ ಆಪ್ತಮಿತ್ರರು, ಯಾಜಕರು ಮತ್ತು ಪ್ರಮುಖರನ್ನೆಲ್ಲ ಯೇಹುವು ಕೊಂದುಹಾಕಿದನು. ಅಹಾಬನ ಜನರಲ್ಲಿ ಯಾರನ್ನೂ ಉಳಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಯೇಹುವು ಇಜ್ರೇಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ, ಅವನ ಸರದಾರರೂ, ಆಪ್ತಮಿತ್ರರೂ, ಪುರೋಹಿತರು ಇವರನ್ನೂ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ.
Kannada BSI Bible 2016
ಈ ಪ್ರಕಾರ ಯೇಹುವು ಅಹಾಬನಿಗೆ ಯಾರನ್ನೂ ಉಳಿಯಗೊಡಿಸದೆ ಇರುವ ವರೆಗೂ ಇಜ್ರೇಲಿನಲ್ಲಿ ಅವನಿಗೆ ಉಳಿದ ಎಲ್ಲಾ ಮನೆಯವರನ್ನೂ ಅವನ ಎಲ್ಲಾ ಹಿರಿಯರನ್ನೂ ನೆಂಟರನ್ನೂ ಯಾಜಕರನ್ನೂ ಸಂಹರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅವನು ಇಜ್ರೇಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತವಿುತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು; ಒಬ್ಬನನ್ನೂ ಉಳಿಸಲಿಲ್ಲ.
Kannada Bible (KNCL) BSI 2016
ಅನಂತರ ಅವನು ಜೆಸ್ರೀಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತಮಿತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು’ ಒಬ್ಬನನ್ನೂ ಉಳಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪ್ರಕಾರ ಯೇಹುವು ಇಜ್ರೆಯೇಲ್ ಪಟ್ಟಣದಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತಮಿತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು; ಒಬ್ಬನನ್ನೂ ಉಳಿಸಲಿಲ್ಲ.