2 Kings 10:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಹುವು ಅಲ್ಲಿಂದ ಹೋದ ಮೇಲೆ, ರೇಕಾಬನ ಮಗನಾದ ಯೆಹೋನಾದ್ವಾನನ್ನು ಸಂಧಿಸಿದನು. ಯೆಹೋನಾದ್ವಾನು ಯೇಹುವನ್ನು ಸಂಧಿಸಲು ಬರುತ್ತಿದ್ದನು. ಯೇಹು ಯೆಹೋನಾದ್ವಾನನ್ನು ಅಭಿನಂದಿಸಿ ಅವನಿಗೆ, “ನಾನು ನಿನಗೆ ನಂಬಿಗಸ್ತನಾಗಿರುವಂತೆ ನೀನು ನನಗೆ ನಂಬಿಗಸ್ತನಾದ ಸ್ನೇಹಿತನಾಗಿರುವಿಯಾ?” ಎಂದು ಕೇಳಿದನು. ಯೆಹೋನಾದ್ವಾನು, “ಹೌದು, ನಾನು ನಿನಗೆ ನಂಬಿಗಸ್ಥನಾದ ಸ್ನೇಹಿತನು” ಎಂದು ಉತ್ತರಿಸಿದನು. ಯೇಹು, “ನೀನು ನಂಬಿಗಸ್ಥನಾದರೆ, ನಿನ್ನ ಕೈಯನ್ನು ಕೊಡು” ಎಂದನು. ನಂತರ ಯೇಹು ಹೊರಬಂದು, ಯೆಹೋನಾದ್ವಾನನ್ನು ರಥದೊಳಕ್ಕೆ ಎಳೆದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ, ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ, “ನಿನ್ನ ವಿಷಯದಲ್ಲಿ, ನನ್ನ ಹೃದಯವು ಯಥಾರ್ಥವಾಗಿರುವಂತೆ ನಿನ್ನ ಹೃದಯವು ಯಥಾರ್ಥವಾಗಿರುವುದೋ?” ಎಂದು ಕೇಳಿದನು. ಅವನು, “ಹೌದು” ಎಂದು ಉತ್ತರ ಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಯನ್ನು ಕೊಡು” ಎನ್ನಲು ಅವನು ತನ್ನ ಕೈಯನ್ನು ಕೊಟ್ಟನು. ಯೇಹುವು ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.
Kannada BSI Bible 2016
ಯೇಹುವು ಅಲ್ಲಿಂದ ಹೋಗಿ ತನ್ನನ್ನು ಎದುರು ಗೊಳ್ಳಲು ರೇಕಾಬನ ಮಗನಾದ ಯೆಹೋನಾದಾ ಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ--ನನ್ನ ಹೃದಯವು ನಿನ್ನ ಹೃದಯದೊಂದಿಗೆ ಇರುವಂತೆ ನಿನ್ನ ಹೃದಯವು ನನ್ನೊಂದಿಗೆ ಸರಿಯಾಗಿದೆಯೋ ಅಂದನು. ಯೆಹೋನಾದಾಬನು--ಅದೆ ಅಂದನು. ಹಾಗಾದರೆ ನಿನ್ನ ಕೈಕೊಡು ಅಂದನು. ಇವನು ತನ್ನ ಕೈಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಏರಿಸಿಕೊಂಡು ಅವ ನಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅಲ್ಲಿಂದ ಮುಂದೆ ಹೋಗುತ್ತಿರುವಾಗ ತನ್ನನ್ನು ಎದುರುಗೊಳ್ಳುವದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ - ನಿನ್ನ ವಿಷಯದಲ್ಲಿ ನನ್ನ ಮನಸ್ಸು ಯಥಾರ್ಥವಾಗಿರುವಂತೆ ನಿನ್ನ ಮನಸ್ಸೂ ಯಥಾರ್ಥವಾಗಿರುತ್ತದೋ ಎಂದು ಕೇಳಿದನು. ಅವನು - ಹೌದು ಎಂದು ಉತ್ತರಕೊಟ್ಟನು. ಆಗ ಯೇಹುವು - ಹಾಗಾದರೆ ನಿನ್ನ ಕೈಕೊಡು ಅನ್ನಲು ಅವನು ಕೈಕೊಟ್ಟನು.
Kannada Bible (KNCL) BSI 2016
ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿದನು. “ನಿನ್ನ ವಿಷಯದಲ್ಲಿ ನನ್ನ ಮನಸ್ಸು ಯಥಾರ್ಥವಾಗಿರುವಂತೆ ನಿನ್ನ ಮನಸ್ಸು ಯಥಾರ್ಥವಾಗಿ ಇರುತ್ತದೋ?’ ಎಂದು ಕೇಳಿದನು. ಅವನು, “ಹೌದು,” ಎಂದು ಉತ್ತರಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಕೊಡು,” ಎನ್ನಲು ಅವನು ಕೈಕೊಟ್ಟನು. ಯೇಹುವು ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಹುವು ಅಲ್ಲಿಂದ ಹೋಗಿ, ತನ್ನನ್ನು ಎದುರುಗೊಳ್ಳಲು ಬಂದ ರೇಕಾಬನ ಮಗ ಯೆಹೋನಾದಾಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ, “ನನ್ನ ಹೃದಯವು ನಿನ್ನ ಹೃದಯದ ಸಂಗಡ ಇರುವ ಹಾಗೆ ನಿನ್ನ ಹೃದಯವು ಯಥಾರ್ಥವಾಗಿ ಇದೆಯೋ?” ಎಂದನು. ಯೆಹೋನಾದಾಬನು, “ಇದೆ,” ಎಂದನು. “ಹಾಗಾದರೆ ನಿನ್ನ ಕೈ ಕೊಡು,” ಎಂದನು. ಇವನು ತನ್ನ ಕೈ ಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಹತ್ತಿಸಿಕೊಂಡು ಅವನಿಗೆ,